ಬೆಂಗಳೂರು: ನಗರದ ಸ್ವಚ್ಛತೆ ಕಾಪಾಡುವಲ್ಲಿ ಹಗಲು ರಾತ್ರಿ ಶ್ರಮಿಸುವ ಪೌರ ಕಾರ್ಮಿಕರ ವೇತನವನ್ನು ಸರ್ಕಾರ ಕೂಡಲೇ 18,000 ರೂ. ರಿಂದ 35,000 ರೂ.ಗೆ ಹೆಚ್ಚಿಸಬೇಕು ಮತ್ತು ಗುತ್ತಿಗೆ ಆಧಾರದಲ್ಲಿ ದುಡಿಯುತ್ತಿರುವ ಪೌರ ಕಾರ್ಮಿಕರನ್ನು ಅವರ ಸೇವಾ ಅವಧಿ ಆಧರಿಸಿ ಖಾಯಂಗೊಳಿಸಬೇಕು ಎಂದು ಚಾಮರಾಜಪೇಟೆ ಶಾಸಕರು ಮತ್ತು ಮಾಜಿ ಸಚಿವರಾದ ಶ್ರೀ ಬಿ ಜೆಡ್ ಜಮೀರ್ ಅಹ್ಮದ್ ಖಾನ್ ಅವರು ಆಗ್ರಹಿಸಿದ್ದಾರೆ.
ಫ್ರೀಡಂ ಪಾರ್ಕಿನಲ್ಲಿ ಕಳೆದ ಐದಾರು ದಿನಗಳಿಂದ ಪ್ರತಿಭಟನೆ ನಡೆಸುತ್ತಿರುವ ಪೌರ ಕಾರ್ಮಿಕರ ಬೇಡಿಕೆಗಳನ್ನು ಸರ್ಕಾರ ಎರಡು ದಿನಗಳೊಳಗಾಗಿ ಈಡೇರಿಸದಿದ್ದರೆ, ಸೋಮವಾರದಿಂದ ನಾನೂ ಇವರೊಂದಿಗೆ ಕುಳಿತು ಪ್ರತಿಭಟಿಸುತ್ತೇನೆ ಎಂದು ಜಮೀರ್ ಅಹ್ಮದ್ ಖಾನ್ ಹೇಳಿದ್ದರು. ಆ ಪ್ರಕಾರ, ಇಂದಿನಿಂದ ಪ್ರತಿಭಟನೆಯಲ್ಲಿ ತೊಡಗಿರುವ ಅವರು, ಪೌರ ಕಾರ್ಮಿಕರನ್ನು ಉದ್ದೇಶಿಸಿ ಮಾತನಾಡಿದರು.
ನವೀನ್, ಪಬ್ಲಿಕ್ ನೆಕ್ಸ್ಟ್, ಬೆಂಗಳೂರು
PublicNext
04/07/2022 07:49 pm