ನೆಲಮಂಗಲ: ನೆಲಮಂಗಲ ನಗರದಲ್ಲಿ ಇಸ್ಪೀಟ್ ಅಡ್ಡೆಗೆ ಶಾಸಕರು ಕುಮ್ಮಕ್ಕು ನೀಡುತ್ತಿದ್ದಾರೆ. ಪೊಲೀಸರು ರೇಡ್ ಮಾಡಿದಾಗ ಜೆಡಿಎಸ್ ಕಾರ್ಯಕರ್ತನೇ ಪೊಲೀಸರ ಮೇಲೆ ಹಲ್ಲೆ ನಡೆಸಿದ್ದು ಎಂಬ ಆರೋಪ ಕೇಳಿ ಬಂದಿದೆ. ಈ ಹಿನ್ನೆಲೆ ನೆಲಮಂಗಲ ಬಿಜೆಪಿ ಯುವ ಮೋರ್ಚಾ ಕಾರ್ಯಕರ್ತರು ತಾಲ್ಲೂಕು ಕಛೇರಿಯಲ್ಲಿ ಪ್ರತಿಭಟನೆ ನಡೆಸಿದರು.
ಇನ್ನೂ ಬೆಂ.ಗ್ರಾ ಜಿಲ್ಲೆ ನೆಲಮಂಗಲ ನಗರದ ತಾಲೂಕು ಕಚೇರಿ ಮುಂಭಾಗ ಬಿಜೆಪಿ ಪ್ರತಿಭಟನೆ ನಡೆಸಿದ್ದು ಶಾಸಕರ ರಾಜೀನಾಮೆಗೆ ಒತ್ತಾಯಿಸಿ ತಹಶೀಲ್ದಾರ್ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ಪತ್ರ ನೀಡಿದರು. ಇತ್ತ ಶಾಸಕ ಶ್ರೀನಿವಾಸ ಮೂರ್ತಿ ಕೂಡ ಈ ಕುರಿತು ನಗರದಲ್ಲಿ ಪತ್ರಿಕಾಗೋಷ್ಟಿ ನಡೆಸಿ ಪೊಲೀಸ್ ಅಧಿಕಾರಿ ಮೇಲೆ ಹಲ್ಲೆ ನೆಡೆಸಿದವರು ನಮ್ಮ ಪಕ್ಷದ ಕಾರ್ಯಕರ್ತರಲ್ಲ. ಕುಮಾರಣ್ಣನವರ ಮೇಲಿನ ಅಭಿಮಾನದಿಂದ ಅಡ್ಡೆಯಲ್ಲಿ ಅವರೊಂದಿಗಿರೋ ಫೋಟೋ ಹಾಕಿಕೊಂಡಿರಬಹುದು. ಅವರು ಕಾಂಗ್ರೆಸ್ ಪಕ್ಷದವರು. ಕಾಂಗ್ರೆಸ್‌ನಿಂದ ಪುರಸಭೆ ಸದಸ್ಯ ಸಹ ಆಗಿದ್ದಾರೆ. ಇಸ್ಪೀಟ್ ಅಡ್ಡೆ ನಡೆಸುತ್ತಿದ್ದ ಹನುಮಂತರಾಜು ಹಾಗೂ ನನಗೂ ಯಾವುದೇ ಸಂಬಂಧವಿಲ್ಲ. ಸೋಷಿಯಲ್ ಮೀಡಿಯಾದಲ್ಲಿ ನನ್ನ ಬಗ್ಗೆ ಅವಹೇಳನಕಾರಿಯಾಗಿ ಪೋಸ್ಟ್ ಮಾಡಿದವರು ಹಾಗೂ ನನ್ನ ವಿರುದ್ಧ ಧಿಕ್ಕಾರ ಕೂಗಿದವರ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡುವ ಮೂಲಕ ಕಾನೂನು ಹೋರಾಟಕ್ಕೆ ನಡೆಸುತ್ತೇನೆ ಎಂದು ಎಚ್ಚರಿಕೆ ನೀಡಿದರು.
ಫೈಲ್: ಎಂಎಲ್ಎ ಎಚ್ಚರಿಕೆ...!
PublicNext
11/07/2022 06:12 pm