ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬೆಂಗಳೂರು: 108 ಟೆಂಡರ್ ನಲ್ಲಿ ಕಿಕ್ ಬ್ಯಾಕ್ ಪಡೆದ ಆರೋಪ: ಐಎಎಸ್ ಅಧಿಕಾರಿ ಪಂಕಜ್ ಪಾಂಡೆ ಕೊರಳಿಗೆ ತನಿಖೆಯ ಉರುಳು

ಬೆಂಗಳೂರು: ಎರಡು ವರ್ಷದ ಹಿಂದೆ ಐಎಎಸ್ ಅಧಿಕಾರಿ ಪಂಕಜ್ ಕುಮಾರ್ ಪಾಂಡೆ ಮೇಲೆ ಎಸಿಬಿಯಲ್ಲಿ ದಾಖಲಾಗಿದ್ದ ಕೇಸ್ ಗೆ ಮರು ಜೀವ ಸಿಕ್ಕಿದೆ. ಸರ್ಕಾರ ಮಹತ್ವಾಕಾಂಕ್ಷೆಯ ಯೋಜನೆಯಾದ ಆರೋಗ್ಯ ಕವಚ ಟೆಂಡರ್ ನಲ್ಲಿ ಕಿಕ್ ಬ್ಯಾಕ್ ಪಡೆದ ಆರೋಪ ಹೊತ್ತಿರುವ ಐಎಎಸ್ ಅಧಿಕಾರಿ ಪಂಕಜ್ ಕುಮಾರ್ ಪಾಂಡೆ ವಿರುದ್ಧ ತನಿಖೆಗೆ ಅನುಮತಿ ನೀಡುವಂತೆ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ಸೂಚನೆ ನೀಡಿದೆ. 2020ರಲ್ಲಿ ಸಾಮಾಜಿಕ ಕಾರ್ಯಕರ್ತ ದಿನೇಶ್ ಕಲ್ಲಹಳ್ಳಿ ಸಲ್ಲಿಸಿದ್ದ ದೂರಿನ ವಿಚಾರಣೆ ಬಳಿಕ ಹೈಕೋರ್ಟ್ ಆದೇಶ ಹೊರಡಿಸಿದ್ದು, ಕಳೆದ ಒಂದು ವರ್ಷಗಳಿಂದ ಸರ್ಕಾರ ತನಿಖೆಗೆ ಅನುಮತಿ ನೀಡಿರಲಿಲ್ಲ.

ಪ್ರಕರಣದ ಹಿನ್ನೆಲೆ ನೋಡೋದಾದ್ರೆ 108ಗೆ ಆ್ಯಂಬುಲೆನ್ಸ್ ಒದಗಿಸಲು ಜಿವಿಕೆ ಕಂಪನಿಗೆ ಟೆಂಡರ್ ನೀಡಲಾಗಿತ್ತು. 2018 ರಲ್ಲಿ ಟೆಂಡರ್ ಅವಧಿ ಮುಗಿದಿದ್ರೂ ಜಿವಿಕೆ ಕಂಪನಿಗೆ ಅಕ್ರಮವಾಗಿ ಹಣ ಬಿಡುಗಡೆ ಮಾಡಲಾಗಿದೆ ಎಂದು ದಿನೇಶ್ ಕಲ್ಲಳ್ಳಿ ದೂರಿನಲ್ಲಿ ಉಲ್ಲೇಖಿಸಿದ್ರು‌.

ಟೆಂಡರ್ ನಿಯಮ ಉಲ್ಲಂಘನೆ ಮಾಡಿ ನೂರಾರು ಕೋಟಿ ಹಣ ನೀಡಿರೋ ಆರೋಪದಡಿ ಅಂದಿನ ಆರೋಗ್ಯ ಇಲಾಖೆ ಕಮೀಷನರ್ ಪಂಕಜ್ ಕುಮಾರ್ ಪಾಂಡೆ ವಿರುದ್ದ ಸಾಮಾಜಿಕ ಕಾರ್ಯಕರ್ತ ದಿನೇಶ್ ಕಲ್ಲಹಳ್ಳಿ ಎಸಿಬಿಗೆ ದೂರು ಕೊಟ್ಟಿದ್ದರು. ಈ ಸಂಬಂಧ 17(A) ನಲ್ಲಿ ತನಿಖೆ ನಡೆಸಲು ಅನುಮತಿ ಕೋರಿ ಎಸಿಬಿ ಸರ್ಕಾರಕ್ಕೆ ಮನವಿ ಮಾಡಿತ್ತು. ಆದರೆ ಅನುಮತಿ ಕೋರಿ ಒಂದು ವರ್ಷವಾದ್ರೂ ಸರ್ಕಾರ ಅನುಮತಿ‌ ನೀಡಿರಲಿಲ್ಲ. ಸರ್ಕಾರದ ವರ್ತನೆ ವಿರುದ್ಧ ದಿನೇಶ್ ಕಲ್ಲಹಳ್ಳಿ ಹೈಕೋರ್ಟ್ ಮೆಟ್ಟಿಲೇರಿದ್ದರು. ಪ್ರಕರಣದ ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್ ಮೂರು ತಿಂಗಳಲ್ಲಿ ಅನುಮತಿ ನೀಡುವಂತೆ ಸರ್ಕಾರಕ್ಕೆ ಆದೇಶಿಸಿದೆ.

Edited By : Somashekar
PublicNext

PublicNext

05/08/2022 05:04 pm

Cinque Terre

25.2 K

Cinque Terre

2

ಸಂಬಂಧಿತ ಸುದ್ದಿ