ಬೆಂಗಳೂರು: ಯಶವಂತಪುರ ವಿಧಾನಸಭಾ ಕ್ಷೇತ್ರದಲ್ಲಿ ಸತತವಾಗಿ ಆಡಳಿತ ಮಾಡುತ್ತಿರುವ ಸಹಕಾರ ಸಚಿವ ಎಸ್.ಟಿ ಸೋಮಶೇಕರ್ ವಿರುದ್ಧ ಎಂ ಹನುಮಂತೇಗೌಡ ಮಾತನಾಡಿದ್ದಾರೆ. ಇಷ್ಟು ವರ್ಷದಲ್ಲಿ ಏನ್ ಅಭಿವೃದ್ಧಿ ಮಾಡಿದ್ದಾರೆ. ಒಂದು ಸಲ ಹೇರೋಹಳ್ಳಿ ವಾರ್ಡ್ ಅನ್ನು ನೋಡಿ ಎಂದು ಟೀಕೆ ಮಾಡಿದ್ದಾರೆ.
ಈ ಎಲ್ಲಾ ಬೆಳವಣಿಗೆಗಳನ್ನ ಗಮನದಲ್ಲಿಟ್ಟುಕೊಂಡ ಬಿಜೆಪಿ ಕಾರ್ಯಕರ್ತರು, ಮುಖಂಡರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಈ ಹಿನ್ನಲೆ ಯಶವಂತಪುರ ವಿಧಾನಸಭಾ ಕ್ಷೇತ್ರದ ನಗರ ಮಂಡಲ ಬಿಜೆಪಿ ಅದ್ಯಕ್ಷ ಅನಿಲ್ ಚೆಳಗೆರೆ ನೇತೃತ್ವದಲ್ಲಿ ಇಂದು ಪ್ರೆಸ್ ಮೀಟ್ ಕೂಡ ನಡೆಸಿದ್ದಾರೆ.
ಕ್ಷೇತ್ರದ ಅಭಿವೃದ್ಧಿ ಸಹಿಸದೇ ಸುಳ್ಳು ಆರೋಪ ಮಾಡುತ್ತಿರುವ ಜೆಡಿಎಸ್ ಮಾಜಿ ಪಾಲಿಕೆ ಸದಸ್ಯ ಎಂ ಹನುಮಂತೇಗೌಡ ಅವರಿಗೆ ಸಚಿವ ಎಸ್.ಟಿ ಸೋಮಶೇಖರ್ ಅವರ ಬಗ್ಗೆ ಮಾತನಾಡುವ ನೈತಿಕತೆ ಜೆಡಿಎಸ್ ಪಕ್ಷದವರಿಗೆ ಇಲ್ಲ. ಕಳೆದ ಎರಡು ವರ್ಷಗಳಿಂದ ಸತತವಾಗಿ ಕ್ಷೇತ್ರದಲ್ಲಿಯೇ ಇದ್ದು ಕೋವಿಡ್ ಸಂದರ್ಭದಲ್ಲಿ ಕ್ಷೇತ್ರದ ಜನರಿಗೆ ಬೇಕಾದ ಎಲ್ಲಾ ನೆರವನ್ನು ನೀಡಿದ್ದಾರೆ. ಕೋವಿಡ್ ಸೋಂಕಿನಿಂದ ಮೃತಪಟ್ಟ ಕುಟುಂಬದ ಸದಸ್ಯರಿಗೆ ತಲಾ ಒಂದು ಲಕ್ಷ ರೂಪಾಯಿಗಳ ಸಹಾಯಧನ ವಿತರಿಸಿದ್ದಾರೆ.
ಹನುಮಂತೇಗೌಡ ಮತ್ತು ಇತರೆ ಜೆಡಿಎಸ್ ಪಕ್ಷದವರು ಕಳೆದ ಎರಡು ವರ್ಷಗಳಿಂದ ಮನೆಯಲ್ಲಿಯೇ ಇದ್ದರು. ಜನರ ಕಷ್ಟ ಸುಖಗಳಿಗೆ ಸ್ಪಂದಿಸಿದೇ ಈಗ ಚುನಾವಣೆಯ ಸಂದರ್ಭದಲ್ಲಿ ಬಂದು ಕ್ಷೇತ್ರದಲ್ಲಿ ಯಾವುದೇ ಕಾಮಗಾರಿ ನಡೆದಿಲ್ಲ ಎಂದು ಆರೋಪ ಮಾಡುವುದು ಸರಿಯಲ್ಲ ಎಂದು ಬಿಜೆಪಿ ನಗರ ಮಂಡಲ ಪ್ರಧಾನ ಕಾರ್ಯದರ್ಶಿ ವಾಜರಹಳ್ಳಿ ಶಶಿಕುಮಾರ್ ಹೇಳಿದ್ದಾರೆ.
PublicNext
02/08/2022 11:32 am