ಬೆಂಗಳೂರು: ನಿನ್ನೆ ದೊಡ್ಡಬಳ್ಳಾಪುರದಲ್ಲಿ ನಡೆದ ಜನಸ್ಪಂದನ ಸಮಾವೇಶದಲ್ಲಿ ಸಚಿವರು ಡ್ಯಾನ್ಸ್ ಮಾಡಿ, ಸಂಭ್ರಮ ಪಟ್ಟಿದ್ದಾರೆ. ಸಮಾವೇಶದಲ್ಲಿ ಸಚಿವರು ಡ್ಯಾನ್ಸ್ ಮಾಡಿದ್ದನ್ನು ವಿರೋಧಿಸಿ ಇಂದು ಕಾಂಗ್ರೆಸ್ ಭವನದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ವಿನೂತನವಾಗಿ ಪ್ರತಿಭಟನೆ ಮಾಡ್ತಿದ್ದಾರೆ...
ನಿನ್ನೆ ನಡೆದ ಬಿಜೆಪಿ ಜನಸ್ಪಂದನ ಸಮಾವೇಶದಲ್ಲಿ ಸಚಿವ ಎಂ.ಟಿ.ಬಿ. ನಾಗರಾಜ್ ಮತ್ತು ಶಾಸಕ, ಬಿಡಿಎ ಅಧ್ಯಕ್ಷ ಎಸ್.ಆರ್.ವಿಶ್ವನಾಥ ಸಖತ್ ಡ್ಯಾನ್ಸ್ ಮಾಡಿದ್ದಾರೆ. ಹೀಗಾಗಿ ನೃತ್ಯ ವಿರೋಧಿಸಿ ಕೈ ಕಾರ್ಯಕರ್ತರು ಸಿಎಂ ಬಸವರಾಜ್ ಬೊಮ್ಮಯಿ ಹಾಗೂ ಸಚಿವರ ಮುಖವಾಡ ಧರಿಸಿ ತಾವೂ ಡ್ಯಾನ್ಸ್ ಮಾಡಿ ವ್ಯಂಗ್ಯ ಮಾಡಿದ್ದಾರೆ.
Kshetra Samachara
11/09/2022 01:51 pm