ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬೆಂಗಳೂರು: ಟಿಕಾಯತ್ ಮೇಲೆ ಹಲ್ಲೆ ಖಂಡಿಸಿ ಕನ್ನಡ ಸಂಘಟನೆಗಳಿಂದ ಪ್ರತಿಭಟನೆ

ರಾಷ್ಟ್ರ ಮಟ್ಟದ ರೈತ‌ ನಾಯಕ ರಾಕೇಶ್ ಟಿಕಾಯತ್ ಮೇಲೆ ನಡೆದ ಹಲ್ಲೆ ಮಸಿ‌ ಎರಚಿದ‌ ಘಟನೆ ಖಂಡಿಸಿ ಕರವೇ (ಪ್ರವೀಣ್ ಕುಮಾರ್ ಶೆಟ್ಟಿ ಬಣ) ತಾಲೂಕು ಘಟಕದ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.

ತಾಲೂಕು ಕಚೇರಿ ಮುಂದೆ ಸೇರಿದ ಕಾರ್ಯಕರ್ತರು ರಾಜ್ಯ ಸರ್ಕಾರ ಹಾಗೂ ಕಿಡಿಗೇಡಿಗಳ ವಿರುದ್ಧ ಧಿಕ್ಕಾರ ಕೂಗಿದರು‌. ಕರವೇ ರಾಜ್ಯ ಪ್ರಧಾನ ಕಾರ್ಯದರ್ಶಿ ರಾಜಘಟ್ಟ ರವಿ ಮಾತನಾಡಿ, ಟಿಕಾಯತ್ ಮೇಲೆ ನಡೆದ ಹಲ್ಲೆ ಅಕ್ಷಮ್ಯ. ರಾಷ್ಟ್ರಮಟ್ಟದ ನಾಯಕ ರಾಜ್ಯಕ್ಕೆ ಭೇಟಿ‌ ನೀಡಿದರೂ ಸೂಕ್ತ ರಕ್ಷಣೆ ಒದಗಿಸುವಲ್ಲಿ ಸರ್ಕಾರ ಹಾಗೂ ಗುಪ್ತಚರ ಇಲಾಖೆ ವಿಫಲವಾಗಿವೆ ಎಂದು ಆಕ್ರೋಶ ವ್ಯಕ್ತಪಡಿಸಿದರು. ಹಲ್ಲೆಕೋರರು, ದುಷ್ಕರ್ಮಿಗಳನ್ನು ಕೂಡಲೇ ಬಂಧಿಸಿ, ರಾಜ್ಯದಿಂದ ಗಡಿಪಾರು ಮಾಡಬೇಕು. ಅವರ ಹಿಂದಿರುವ ಶಕ್ತಿಗಳನ್ನು ಪತ್ತೆ ಹಚ್ಚಿ, ಉಗ್ರ ಶಿಕ್ಷೆ ನೀಡಬೇಕು ಎಂದು ಒತ್ತಾಯಿಸಿದರು.

Edited By :
PublicNext

PublicNext

31/05/2022 01:09 pm

Cinque Terre

22.01 K

Cinque Terre

0

ಸಂಬಂಧಿತ ಸುದ್ದಿ