ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬೆಂಗಳೂರು: ಶಾಲಾ-ಕಾಲೇಜ್‌ಗೆ ಹಿಜಾಬ್ ಧರಿಸಿ ಬರಲು ಅವಕಾಶ ಇಲ್ಲ: ಗೃಹ ಸಚಿವರ ಸ್ಪಷ್ಟನೆ

ಬೆಂಗಳೂರು: ಶಾಲೆಗಳಲ್ಲಿ ಸಮವಸ್ತ್ರ ಕಡ್ಡಾಯ ಎಂದು ಈಗಾಗಲೇ ಶಿಕ್ಷಣ ಸಚಿವರು ಹೇಳಿದ್ದಾರೆ. ಕೆಲವು ಕೋಮು ಸಂಘಟನೆಗಳು ಹಿಜಾಬ್ ಧರಿಸುವ ವಿಚಾರವನ್ನು ದೊಡ್ಡ ವಿವಾದವಾಗಿ ಸೃಷ್ಟಿಸಿವೆ. ಎಲ್ಲ ವಿದ್ಯಾರ್ಥಿಗಳು ಭಾರತ ಮಾತೆಯ ಮಕ್ಕಳು. ಹಾಗಾಗಿ ಶಾಲಾ-ಕಾಲೇಜುಗಳಲ್ಲಿ ಹಿಜಾಬ್ಅನ್ನೂ ಧರಿಸುವಂತಿಲ್ಲ, ಕೇಸರಿ ಶಾಲನ್ನೂ ಧರಿಸುವಂತಿಲ್ಲ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿದ್ದಾರೆ.

ವಿಧಾನ ಸೌಧದ ಎದುರು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಧರ್ಮ ಆಚರಣೆಗಾಗಿ, ಪೂಜೆ ಪುನಸ್ಕಾರಕ್ಕಾಗಿ ಚರ್ಚ್, ಮಸೀದಿ, ದೇವಸ್ಥಾನಗಳಿವೆ. ಅಲ್ಲಿ ಧಾರ್ಮಿಕ ಆಚರಣೆಗಳನ್ನು ಆಚರಿಸಬಹುದು. ಆದರೆ ವಿದ್ಯಾರ್ಥಿಗಳಾದ ಅವರೆಲ್ಲ ಭಾರತಾಂಬೆಯ ಮಕ್ಕಳು. ಈ ಭಾವನೆಯಿಂದ ಇದ್ದರೆ ಎಲ್ಲರೂ ಉತ್ತಮ ಸಂಸ್ಕಾರ ಕಲಿಯಲು ಸಾಧ್ಯವಿದೆ. ಶಾಲೆಗಳಲ್ಲಾದರೂ ಮಕ್ಕಳು ದೇಶದ ಐಕ್ಯತೆ ಬಗ್ಗೆ ಸಂಸ್ಕಾರ ಪಡೆಯಬೇಕು. ಇಲ್ಲದಿದ್ದರೆ ಅದು ದುಷ್ಪರಿಣಾಮ ಬೀರುತ್ತದೆ ಎಂದು ಆರಗ ಜ್ಞಾನೇಂದ್ರ ಹೇಳಿದ್ದಾರೆ.

ಹಿಜಾಬ್ ಹಿಂದೆ ಇರುವ ಮತೀಯ ಸಂಘಟನೆಗಳ ಬಗ್ಗೆ ಗಮನ ಕೊಡಲು ಪೊಲೀಸರಿಗೆ ಹೇಳಿದ್ದೇನೆ. ರಾಷ್ಟ್ರ ಒಗ್ಗಟ್ಟಾಗಬೇಕು ಎಂಬುದಕ್ಕೆ ಅಡ್ಡಗಾಲಾಗುವವರನ್ನು ಸರಿ ಮಾಡುವ ಕೆಲಸ ನಾವು ಮಾಡಬೇಕಾಗುತ್ತದೆ. ಶಾಲೆ ಕಾಂಪೌಂಡ್ ಒಳಗೆ ಹಿಜಾಬ್ ಧರಿಸಬಾರದು, ಹಸಿರು ಶಾಲು, ಕೇಸರಿ ಶಾಲು ಧರಿಸಬಾರದು. ಶಾಲೆಯ ಮ್ಯಾನೇಜ್‌ಮೆಂಟ್ ಹೇಳುವ ರೀತಿಯಲ್ಲೇ ನಡೆದುಕೊಳ್ಳಬೇಕು ಎಂದು ಗೃಹ ಸಚಿವರು ಹೇಳಿದ್ದಾರೆ.

Edited By : Nagesh Gaonkar
PublicNext

PublicNext

03/02/2022 07:56 pm

Cinque Terre

47.82 K

Cinque Terre

12

ಸಂಬಂಧಿತ ಸುದ್ದಿ