ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಮಾರ್ಚ್ 4 ರಿಂದ 30 ರ ವರಗೆ ವಿಧಾನಸೌಧ ಸುತ್ತಮುತ್ತ ಸೆಕ್ಷನ್ 144 ಜಾರಿ

ಬೆಂಗಳೂರು: ಮಾರ್ಚ್ 4 ರಿಂದ 30 ರ ವರಗೆ ವಿಧಾನಸಭಾ ಅಧಿವೇಶನ ನಡೆಯಲಿದ್ದು, ಈ ವೇಳೆ ವಿಧಾನಸೌಧ ಸುತ್ತಮುತ್ತ ನಿಷೇಧಾಜ್ಞೆ ವಿಧಿಸಿ ನಗರ ಪೊಲೀಸ್ ಆಯುಕ್ತ ಕಮಲ್ ಪಂತ್ ಆದೇಶ ಹೊರಡಿಸಿದ್ದಾರೆ.

ಪ್ರತಿದಿನ ಬೆಳಗ್ಗೆ 6 ರಿಂದ ಮಧ್ಯರಾತ್ರಿ 12ವರೆಗೆ ನಿಷೇಧಾಜ್ಞೆ ಜಾರಿಯಲ್ಲಿರಲಿದೆ. ಈ ಅವಧಿಯಲ್ಲಿ ಪ್ರತಿಭಟನೆ, ರ್ಯಾಲಿ, ಧರಣಿ, ಗುಂಪುಗೂಡುವುದನ್ನು ನಿಷೇಧಿಸಲಾಗಿದೆ.

ಈ ಕಾನೂನು ನಿಯಮ ಉಲ್ಲಂಘನೆ ಮಾಡಿದವರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಕಮೀಷನರ್ ವಾರ್ನ್ ಮಾಡಿದ್ದಾರೆ.

Edited By : Nirmala Aralikatti
PublicNext

PublicNext

28/02/2022 10:00 pm

Cinque Terre

19.03 K

Cinque Terre

0

ಸಂಬಂಧಿತ ಸುದ್ದಿ