ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ನಡು ರಸ್ತೆಯಲ್ಲೇ ಧರಣಿಗೆ ಕುಳಿದ ಸಿದ್ದು, ಡಿಕೆಶಿ- ಹೊತ್ತು ವ್ಯಾನ್‌ಗೆ ಹಾಕಿದ ಪೊಲೀಸ್‌

ಬೆಂಗಳೂರು: ಜಾರಿ ನಿರ್ದೇಶನಾಲಯದ (ಇಡಿ) ವಿಚಾರಣೆ ಹೆಸರಿನಲ್ಲಿ ರಾಹುಲ್‌ ಗಾಂಧಿ ಸೇರಿದಂತೆ ಕಾಂಗ್ರೆಸ್‌ ನಾಯಕರಿಗೆ ಕಿರುಕುಳ ನೀಡುತ್ತಿರುವ ಬಿಜೆಪಿ ದ್ವೇಷದ ರಾಜಕಾರಣ ಖಂಡಿಸಿ ಗುರುವಾರ ಕಾಂಗ್ರೆಸ್‌ ನಾಯಕರು ರಾಜಭವನಕ್ಕೆ ಮುತ್ತಿಗೆ ಹಾಕಲು ಮುಂದಾಗಿದ್ದಾರೆ. ಇನ್ನು ಈ ರ‍್ಯಾಲಿ ವೇಳೆ ಭಾರೀ ಹೈಡ್ರಾಮಾ ನಡೆದಿದ್ದು, ಮಾರ್ಗ ಮಧ್ಯೆಯೇ ಪ್ರತಿಭಟನಾಕಾರರನ್ನು ಪೊಲೀಸರು ಧರಣಿ ನಡೆಸುತ್ತಿದ್ದ ಮಾಜಿ ಸಿಎಂ ಸಿದ್ದರಾಮಯ್ಯ ಹಾಗೂ ಡಿ.ಕೆ. ಶಿವಕುಮಾರ್‌ ಅವರನ್ನು ವಶಕ್ಕೆ ಪಡೆದಿದ್ದಾರೆ.

ಬೆಂಗಳೂರಿನ ಕೆಪಿಸಿಸಿ ಕಚೇರಿಯಿಂದ ಆರಂಭವಾದ ಕಾಂಗ್ರೆಸ್ ಪ್ರತಿಭಟನಾ ರ‍್ಯಾಲಿಯನ್ನು ಇಂಡಿಯನ್ ಎಕ್ಸ್‌ಪ್ರೆಸ್ ಕಚೇರಿ ಬಳಿ ಪೊಲೀಸರು ಬ್ಯಾರಿಕೇಡ್‌ಗಳನ್ನು ಹಾಕಿ ತಡೆದಿದ್ದಾರೆ. ಪ್ರತಿಭಟನಾಕಾರರು ಹಾಗೂ ಪೊಲೀಸರ ನಡುವೆ ನೂಕಾಟ ತಳ್ಳಾಟ ನಡೆದಿದೆ. ಆದರೆ ಪೊಲೀಸರು ರಾಜಭವನದತ್ತ ಪ್ರತಿಭಟನಾಕಾರರು ತೆರಳದಂತೆ ತಡೆದು ಅವರನ್ನು ವಶಕ್ಕೆ ಪಡೆದಿದ್ದಾರೆ.

ಕಾಂಗ್ರೆಸ್‌ ಆಯೋಜಿಸಿರುವ ರಾಜ್‌ ಭವನ್‌ ಚಲೋ ಹಿನ್ನೆಲೆ ಮುಂಜಾಗೃತಾ ಕ್ರಮವಾಗಿ ರಾಜಭವನಕ್ಕೆ ಪೊಲೀಸ್ ಭದ್ರತೆ ಕಲ್ಪಿಸಲಾಗಿದೆ. ರಾಜಭವನ ಬಳಿ ಬ್ಯಾರಿಕೇಡ್‌ ಅಳವಡಿಸಲಾಗಿದ್ದು, 6 ಪೊಲೀಸ್ ಇನ್ಸ್ಪೆಕ್ಟರ್, 14 ಪೊಲೀಸ್ ಸಬ್ಇನ್ಸ್ಪೆಕ್ಟರ್, 100 ಪೊಲೀಸ್ ಕಾನ್ಸ್ಟೇಬಲ್ ಹಾಗೂ 3 ಕೆಎಸ್ಆರ್‌ಪಿ ತುಕಡಿ ಸೇರಿದಂತೆ ಒಟ್ಟು ನೂರಕ್ಕೂ ಹೆಚ್ಚು ಪೊಲೀಸರನ್ನ ರಾಜಭಾವನ ಬಳಿ ನಿಯೋಜನೆ ಮಾಡಲಾಗಿದೆ.

Edited By : Vijay Kumar
PublicNext

PublicNext

16/06/2022 01:46 pm

Cinque Terre

37.34 K

Cinque Terre

22

ಸಂಬಂಧಿತ ಸುದ್ದಿ