ಬೆಂಗಳೂರು: ವಸತಿ ಸಚಿವ ವಿ.ಸೋಮಣ್ಣ ಹಾಗೂ ಅವರ ಪುತ್ರ ಅರುಣ್ ಸೋಮಣ್ಣರವರ ದೊಡ್ಡ ಕಟೌಟ್ ಹಾಕಿದನ್ನು ಪ್ರಶ್ನಿಸಿದ ಕೆಆರ್ ಎಸ್ ಪಕ್ಷದ ಕಾರ್ಯಕರ್ತನೋರ್ವನ ಮೇಲೆ ಸಚಿವನ ಬೆಂಬಲಿಗರು ಹಲ್ಲೆ ನಡೆಸಿದ ಘಟನೆ ನಿನ್ನೆ ಮಾಗಡಿ ರಸ್ತೆಯ ಟೋಲ್ ಗೇಟ್ ಬಳಿ ನಡೆಸಿದೆ.
ಬೆಂಗಳೂರಲ್ಲಿ ಬ್ಯಾನರ್, ಫ್ಲೆಕ್ಸ್, ಕಟೌಟ್ ಹಾಕದಂತೆ ಹೈಕೋರ್ಟ್ ಸ್ಪಷ್ಟ ನಿರ್ದೇಶನ ನೀಡಿದೆ. ಆದರೂ ಸಚಿವರ ಕಟೌಟ್ ಹಾಕಿದ್ದನ್ನು ಕೆಆರ್ ಎಸ್ ಪಕ್ಷದ ಕಾರ್ಯಕರ್ತರು ಪ್ರಶ್ನಿಸಿದ್ದಾರೆ.
ಸ್ಥಳಕ್ಕೆ ಬಂದ ಪೊಲೀಸರು ದೂರು ನೀಡುವಂತೆ ಸೂಚನೆ ನೀಡಿದ್ದಾರೆ. ಆ ವೇಳೆ ಸ್ಥಳಕ್ಕೆ ಬಂದ ಸಚಿವ ಸೋಮಣ್ಣ ಬೆಂಬಲಿಗರು ವಾದ ಮಾಡಿದ್ದು, ಕೆಆರ್ ಎಸ್ ಪಕ್ಷದ ಕಾರ್ಯಕರ್ತರ ನಡುವೆ ಮಾತಿನ ಚಕಮಕಿ ನಡೆದು ಬಳಿಕ ವಿಕೋಪಕ್ಕೆ ಹೋಗಿದೆ. ಪೊಲೀಸರ ಮುಂದೆಯೇ ಕೆಆರ್ ಎಸ್ ಪಕ್ಷದ ಕಾರ್ಯಕರ್ತನ ಮೇಲೆ ಹಲ್ಲೆ ನಡೆಸಿದ್ದಾರೆ. ಈ ಸಂಬಂಧ ಬೆಂಬಲಿಗರ ವಿರುದ್ಧ ವಿಜಯ ನಗರ ಪೊಲೀಸ್ ಠಾಣೆಯಲ್ಲಿ ಎಫ್ ಐಆರ್ ದಾಖಲಾಗಿದೆ.
PublicNext
14/07/2022 08:20 pm