ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬೆಂಗಳೂರು: ಕೃಷ್ಣಾ ಭಾಗ್ಯ ಜಲ ನಿಗಮದ ಕಚೇರಿ ಆಲಮಟ್ಟಿಗೆ ಸ್ಥಳಾಂತರಕ್ಕೆ ಸರ್ಕಾರ ಆದೇಶ ಕೊಟ್ರು ಅಧಿಕಾರಿ ಮಾತ್ರ ಡೋಂಟ್ ಕೇರ್

ಬೆಂಗಳೂರು: ಉತ್ತರ ಕರ್ನಾಟಕದ ಮಹಾತ್ವಕಾಂಕ್ಷೆ ಯೋಜನೆಯಾದ ಕೃಷ್ಣ ಭಾಗ್ಯ ಜಲ ನಿಗಮ ಯೋಜನೆ ಇನ್ನೂ ಯೋಜನೆಯಾಗೆ ಉಳಿದಿದೆ. ಸರ್ಕಾರ ಎರಡೆರಡು ಬಾರಿ ಅಧಿಕಾರಿಗಳ ಕಚೇರಿಯನ್ನು ಬೆಂಗಳೂರಿನಿಂದ ಆಲಮಟ್ಟಿಗೆ ಸ್ಥಳಾಂತರ ಮಾಡುವಂತೆ ಆದೇಶ ಮಾಡಿದ್ದರು. ಆದರೆ ಅಧಿಕಾರಿಗಳು ಮಾತ್ರ ಡೋಂಟ್ ಕೇರ್ ಮನಸ್ಥಿತಿ ತೋರುತ್ತಿದ್ದಾರೆ. ಆದೇಶವಿದ್ದರೂ ಕೃಷ್ಣ ಭಾಗ್ಯ ಜಲ ನಿಗಮದ ಕಚೇರಿಯನ್ನು ಆಲಮಟ್ಟಿಗೆ ಸ್ಥಳಾಂತರ ಮಾಡಿ ಸರ್ಕಾರ ಈಗಾಗ್ಲೆ ಎತಡು ಬಾರಿ ಕೆಬಿಜೆ ಎನ್ ಎಲ್ ಎಂಡಿ ಶಿವಕುಮಾರ್ ಅವರಿಗೆ ಆದೇಶ ಮಾಡಿದ್ರೂ ಶಿವಕುಮಾರ್ ಮಾತ್ರ ಬೆಂಗಳೂರು ಕಚೇರಿಯಲ್ಲೆ ಅಂಟಿಕೊಂಡು ಕುಳಿತಿದ್ದಾರೆ.

ಸದ್ಯ ಈ ಹೋರಾಟವನ್ನ ತೀವ್ರಗೊಳಿಸಲು ಉತ್ತರ ಕರ್ನಾಟಕ ರೈತರ ಅಭಿವೃದ್ಧಿ ಸಂಘ ಮುಂದಾಗಿದ್ದು, ಸರ್ಕಾರದ ಆದೇಶ ಉಲ್ಲಂಘನೆ ಮಾಡುತ್ತಿರುವ ನೀರಾವರಿ ನಿಗಮ ಮತ್ತು ಕೆಬಿಜೆಎನ್ಎಲ್ ಅಧಿಕಾರಿಗಳ ವಿರುದ್ಧ ಕೋರ್ಟ್ ಮೆಟ್ಟಿಲೇರಿದ್ದಾರೆ. ಈ ಸಂಬಂಧ ಇಂದು ಉತ್ತರ ಕರ್ನಾಟಕ ರೈತರ ಅಭಿವೃದ್ಧಿ ಸಂಘದ ರಾಜ್ಯಾಧ್ಯಕ್ಷ ಯಾಸೀನ್ ಎನ್ ಜವಳಿ ನೇತೃತ್ವದ್ಲಲ್ಲಿ ರೈತರು ಕೃಷ್ಣಾ ಭಾಗ್ಯ ಜಲ ನಿಗಮದ ವ್ಯವಸ್ಥಾಪಕ ನಿರ್ದೇಶಕರನ್ನು ಭೇಟಿ ಮಾಡಿದರು. ಸರ್ಕಾರದ ಆದೇಶದ ಪ್ರಕಾರ ಕೆಬಿಜೆಎನ್ ಎಲ್ ಕಚೇರಿಯನ್ನು ಉತ್ತರ ಕರ್ನಾಟಕಕ್ಕೆ ಸ್ಥಳಾಂತರ ಮಾಡಿದಿರುವ ಬಗ್ಗೆ ವಿವರಣೆ ಕೋರಿದರು. ನಿಗದಿತ ಅವಧಿಯೊಳಗೆ ಸ್ಥಳಾಂತರ ಪ್ರಕ್ರಿಯೆ ಮುಗಿಸಲು ಜಲಸಂಪನ್ಮೂಲ ಇಲಾಖೆ ಸೂಚನೆ ನೀಡಿದ್ದರೂ, ಇನ್ನೂ ಬೆಂಗಳೂರಿನಲ್ಲೇ ನಿಗಮದ ವ್ಯವಸ್ಥಾಪಕ ನಿರ್ದೇಶಕರು ಕೆಲಸ ಮಾಡುತ್ತಿರುವುದಕ್ಕೆ ಆಕ್ಷೇಪ ವ್ಯಕ್ತಪಡಿಸಿದರು.

ಕಳೆದ ಮೇ 12ರಂದು ರಾಜ್ಯ ಜಲಸಂಪನ್ಮೂಲ ಇಲಾಖೆಯು ಕೃಷ್ಣ ಭಾಗ್ಯ ಜಲ ನಿಗಮದ ಎಲ್ಲಾ ಕಚೇರಿಗಳನ್ನು ಮತ್ತು ಸಿಬ್ಬಂದಿಯನ್ನು ಒಂದು ವಾರದ ಒಳಗೆ ಆಲಮಟ್ಟಿಗೆ ಸ್ಥಳಾಂತರ ಮಾಡಲು ಸೂಚನೆ ನೀಡಿತ್ತು. ಜೊತೆಗೆ ಈ ಸಂಬಂಧ ಅನುಪಾಲನಾ ವರದಿ ನೀಡಲು ಸಹ ನಿರ್ದೇಶನ ನೀಡಲಾಗಿತ್ತು. ಆದರೂ ಕಚೇರಿ ಸ್ಥಳಾಂತರ ಆಗದ ಬಗ್ಗೆ ಯಾಸೀನ್ ಜವಳಿ ನೇತೃತ್ವದಲ್ಲಿ ನಿಗಮದ ಅಧಿಕಾರಿಗಳನ್ನು ಪ್ರಶ್ನಿಸಿ ಕೋರ್ಟ್ ಮೊರೆ ಹೋಗಿದ್ದಾರೆ.

Edited By : Nagesh Gaonkar
PublicNext

PublicNext

24/08/2022 07:17 pm

Cinque Terre

23.73 K

Cinque Terre

0

ಸಂಬಂಧಿತ ಸುದ್ದಿ