ಬೆಂಗಳೂರು: ಬಿಡಿಎ ಅಂದ್ರೆ ಬೇಕಾಗಿರುವುದನ್ನು ಪಡೆಯುವಂತಹ ಲಾಭದಾಯಕ ಹುದ್ದೆ. ಶಾಸಕರು, ಸಚಿವರು ಇಂಥಹ ಹುದ್ದೆ ಅಲಂಕರಿಸಬಾರದು ಅನ್ನೋ ಆರೋಪ ಮಾಡಲಾಗಿದೆ. ಹೀಗಾಗಿ ಶಾಸಕ ಸ್ಥಾನದಿಂದ ಎಸ್.ಆರ್.ವಿಶ್ವನಾಥ್ ಅವರನ್ನು ಅನರ್ಹಗೊಳಿಸುವಂತೆ ವಕೀಲ ಎ.ಎಸ್ ಹರೀಶ್ ಕೋರ್ಟ್‌ಗೆ ಪಿಐಎಲ್ ಸಲ್ಲಿಸಿದ್ದಾರೆ.
ಸದ್ಯ ಈ ತೀರ್ಪನ್ನು ಹೈಕೋರ್ಟ್ ಕಾಯ್ದಿರಿಸಿದೆ. ಶಾಸಕರು ಲಾಭದಾಯಕ ಹುದ್ದೆ ಹೊಂದುವಂತಿಲ್ಲ. ಶಾಸಕರಾಗಿರುವ ಎಸ್.ಆರ್ ವಿಶ್ವನಾಥ್ ಬಿಡಿಎ ಅಧ್ಯಕ್ಷರಾಗಿ ವೇತನ ಪಡೆಯುತ್ತಿದ್ದಾರೆ. ಅನರ್ಹಗೊಳಿಸುವಂತೆ ರಾಜ್ಯಪಾಲರಿಗೆ ಮನವಿ ಸಲ್ಲಿಸಲಾಗಿದ್ದು, ಅಲ್ಲಿಯೂ ಕ್ರಮವಾಗದ್ದರಿಂದ ಕೋರ್ಟ್ ಸಂಪರ್ಕಿಸುವುದು ಅನಿವಾರ್ಯವಾಗಿದೆ ಎಂದು ಅರ್ಜಿದಾರರ ಪರ ಹಿರಿಯ ವಕೀಲ ಪ್ರಶಾಂತ್ ಭೂಷಣ್ ವಾದ ಮಂಡಿಸಿದ್ದಾರೆ.
ಹೈಕೋರ್ಟ್ ವಿಭಾಗೀಯ ಪೀಠ ತೀರ್ಪು ಕಾಯ್ದಿರಿಸಿದ್ದು, ಸುದೀರ್ಘ ವಾದ ಆಲಿಸಿ ಹೈಕೋರ್ಟ್ ಪೀಠ ತೀರ್ಪು ಕಾಯ್ದಿರಿಸಿದೆ. ಹಂಗಾಮಿ ಸಿಜೆ ಅಲೋಕ್ ಅರಾಧೆ & ನ್ಯಾ.ಎಸ್ ವಿಶ್ವಜಿತ್ ಶೆಟ್ಟಿ ಅವರ ನೇತೃತ್ವದ ವಿಭಾಗೀಯ ಪೀಠ ಸದ್ಯ ತೀರ್ಪು ಕಾಯ್ದಿರಿಸಿದೆ. ಸದ್ಯ ಹೈಕೋರ್ಟ್ ತೀರ್ಪಿನ ಮೇಲೆ ಶಾಸಕ ವಿಶ್ವನಾಥ್ ಬಿಡಿಎ ಅಧ್ಯಕ್ಷ ಸ್ಥಾನ ನಿಂತಿದೆ.
Kshetra Samachara
24/08/2022 10:15 pm