ಬಿಬಿಎಂಪಿ ಚುನಾವಣೆ ನಡೆಯುತ್ತೋ, ಇಲ್ಲವೋ? ಆದರೆ, ಕೈ ನಾಯಕರು ಮಾತ್ರ ಚುನಾವಣೆಗೆ ಸದ್ದಿಲ್ಲದೆ ತಯಾರಿ ಮಾಡಿಕೊಂಡಿದ್ದು, ನಿನ್ನೆ ಸುಪ್ರೀಂ ಕೋರ್ಟ್ ನೀಡಿರುವ ಆದೇಶವನ್ನು ಸರ್ಕಾರ ಪಾಲಿಸಲೇ ಬೇಕು ಎಂದು ಬಿಬಿಎಂಪಿ ಮಾಜಿ ಆಡಳಿತ ಪಕ್ಷದ ನಾಯಕ ಅಬ್ದುಲ್ ವಾಜೀದ್ ಹೇಳಿದ್ದಾರೆ.
ಈಗಾಗಲೇ ಸುಪ್ರೀಂ ಕೋರ್ಟ್ ನಲ್ಲಿ ವಿಚಾರಣೆ ನಡೆಯುತ್ತಿದ್ದು, ವಾರದೊಳಗೆ ವಾರ್ಡ್ ಮೀಸಲಾತಿ ಪಟ್ಟಿ ಬಿಡುಗಡೆ ಮಾಡುವಂತೆ ಸರ್ಕಾರಕ್ಕೆ ಕೋರ್ಟ್ ಸೂಚನೆ ನೀಡಿದೆ. ಅದನ್ನು ಪಾಲನೆ ಮಾಡಲೇ ಬೇಕು. ಇಲ್ಲವಾದಲ್ಲಿ ನಾವೂ ಮತ್ತೊಮ್ಮೆ ಕೋರ್ಟ್ ಮೊರೆ ಹೋಗಬೇಕಾದೀತು ಎಂದು ಅವರು ಸರ್ಕಾರಕ್ಕೆ ಎಚ್ಚರಿಕೆ ನೀಡಿದ್ದಾರೆ. ಹೀಗಾಗಿ ಕಾಂಗ್ರೆಸ್ ಬಿಬಿಎಂಪಿ ಚುನಾವಣೆ ಎದುರಿಸಲು ಸಿದ್ಧತೆ ಮಾಡಿಕೊಂಡಿದೆ. ಇವರ ಜತೆ ನಮ್ಮ ಪ್ರತಿನಿಧಿ ಗಣೇಶ್ ಹೆಗಡೆ ನಡೆಸಿರುವ ಚಿಟ್ ಚಾಟ್ ಇಲ್ಲಿದೆ...
PublicNext
29/07/2022 06:19 pm