ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬೆಂಗಳೂರು: 'ಸಕಾಲಕ್ಕೆ ಜನರಿಗೆ ಸ್ಪಂದಿಸದೆ ರಾಜ್ಯ ಮೂರೂ ಪಕ್ಷಗಳಿಂದ ಕಾಲಹರಣ'

ನಮ್ಮ ಪಕ್ಷ ಪ್ರಾರಂಭವಾಗಿ 10 ವರ್ಷ ಕೂಡ ಕಳೆದಿಲ್ಲ. ಆಗಲೇ 2 ರಾಜ್ಯಗಳಲ್ಲಿ ಅಧಿಕಾರ ನಡೆಸುತ್ತಿದ್ದೇವೆ. ಅರವಿಂದ್ ಕೇಜ್ರಿವಾಲ್ ಅವರ ಜನಪರ ಕಾರ್ಯಕ್ರಮಗಳನ್ನು ನೋಡಿ ದೇಶದ ಜನ ನಮ್ಮ ಪಕ್ಷಕ್ಕೆ ಬಹುಮತ ನೀಡಿದ್ದಾರೆ ಎಂದು ಆಮ್‌ ಆದ್ಮಿ ಪಕ್ಷದ ರಾಜ್ಯಾಧ್ಯಕ್ಷ ಪೃಥ್ವಿ ರೆಡ್ಡಿ ಹೇಳಿದ್ದಾರೆ.

2023ರ ವಿಧಾನಸಭಾ ಚುನಾವಣೆ ವಿಚಾರವಾಗಿ ನಗರದ ಪ್ರೆಸ್ ಕ್ಲಬ್‌ನಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾತನಾಡಿದ ಅವರು, ರಾಜ್ಯದಲ್ಲಿರುವ ಮೂರೂ ಪಕ್ಷಗಳು ಜನರಿಗೆ ಸ್ಪಂದಿಸದೇ ಕಾಲಹರಣ ಮಾಡುತ್ತಿವೆ ಎಂದು ವಾಗ್ದಾಳಿ ನಡೆಸಿದರು.

ಮುಂಬರುವ ಬಿಬಿಎಂಪಿ ಚುನಾವಣೆಗೆ ಕಳೆದೆರಡು ವರ್ಷಗಳಿಂದ ತಯಾರಿ ನಡೆಸಿದ್ದೇವೆ. ಇನ್ನೇನು ಕೆಲವೇ ದಿನಗಳಲ್ಲಿ ಸ್ಥಳೀಯ ಪಾಲಿಕೆ ಚುನಾವಣೆ ಪ್ರಕ್ರಿಯೆ ಪ್ರಾರಂಭ ಆಗುತ್ತಿದೆ. ಹೀಗಾಗಿ ನಾವು ಭಾಸ್ಕರ್ ರಾವ್ ನೇತೃತ್ವದಲ್ಲಿ ಆಮ್ ಆದ್ಮಿ ಪಕ್ಷದ ಪ್ರಚಾರ ಸಮಿತಿಗೆ ಅಧ್ಯಕ್ಷರನ್ನಾಗಿ ಆಯ್ಕೆ ಮಾಡಿಕೊಂಡಿದೇವೆ. ಜನರಿಗೆ ಶಾಲೆ, ಉತ್ತಮ ರಸ್ತೆ, ನೀರು ವಿದ್ಯುತ್ ಮತ್ತು ಬೆಳವಣಿಗೆಗಾಗಿ ಪೂರಕ ವಾತಾವರಣ ಬೇಕಾಗಿದೆ. ಇದನ್ನು ಆಮ್ ಆದ್ಮಿ ಪಕ್ಷ ದೇಶದ ಹಲವು ಕಡೆಗಳಲ್ಲಿ ಕಲ್ಪಸಿಕೊಟ್ಟು ಅಲ್ಲಲ್ಲಿ ಜಯಭೇರಿ ಬಾರಿಸಿದೆ ಎಂದು ತಿಳಿಸಿದರು.

ಸುದ್ದಿಗೋಷ್ಠಿಯಲ್ಲಿ ಆಮ್‌ ಆದ್ಮಿ ಪಕ್ಷದ ರಾಜ್ಯ ಉಪಾಧ್ಯಕ್ಷ ಭಾಸ್ಕರ್ ರಾವ್, ಮುಖಂಡರಾದ ಕೆ,ಮಥಾಯಿ, ಮೋಹನ್ ದಾಸರಿ, ಜಗದೀಶ್ ಸದಂ, ಲಕ್ಷ್ಮಿಕಾಂತ್ ರಾವ್ ಸೇರಿದಂತೆ ಹಲವರು ಭಾಗಿಯಾಗಿದ್ದರು.

Edited By :
PublicNext

PublicNext

01/08/2022 08:57 pm

Cinque Terre

32.93 K

Cinque Terre

0

ಸಂಬಂಧಿತ ಸುದ್ದಿ