ಕಾಂಗ್ರೆಸ್ ನಾಯಕರಾದ ಎಂ.ಡಿ.ಲಕ್ಷ್ಮೀನಾರಾಯಣ್ ಇಂದು ಅಧಿಕೃತವಾಗಿ ಕಾಂಗ್ರೆಸ್ ಪಕ್ಷ ತೊರೆಯುವ ನಿರ್ಧಾರ ಕೈಗೊಂಡಿದ್ದಾರೆ. ಶೀಘ್ರದಲ್ಲೇ ಆಪ್ ಅಥವಾ ಬಿಜೆಪಿ ಸೇರುವ ಸಾಧ್ಯತೆ ಇದೆ.
ಈ ಬಗ್ಗೆ ಅಭಿಮಾನಿಗಳ ಅಭಿಪ್ರಾಯ ಸಂಗ್ರಹಿಸಿ ತೀರ್ಮಾನ ತೆಗೆದುಕೊಳ್ಳಲು ನಿರ್ಧರಿಸಿದ್ದು, ಬಿಎಸ್ ವೈ ಜೊತೆಯೂ ಲಕ್ಷ್ಮೀ ನಾರಾಯಣ್ ಮಾತುಕತೆ ನಡೆಸಲಿದ್ದಾರೆ ಎನ್ನಲಾಗಿದೆ. ಬಿಜೆಪಿಗೆ ಬರುವಂತೆ ಬಿಎಸ್ ವೈ ಗ್ರೀನ್ ಸಿಗ್ನಲ್ ನೀಡಿದ್ದು, ಬಹುತೇಕ ಬಿಜೆಪಿ ಸೇರ್ಪಡೆಯಾಗುವ ಸಾಧ್ಯತೆ ಇದೆ. ಶಾಸಕರ ಭವನದಲ್ಲಿ ನಡೆಯುತ್ತಿರುವ ಎಂಡಿಎಲ್ ಸಭೆಯಲ್ಲಿ ಅವರ ಬೆಂಬಲಿಗರು ಮತ್ತು ಅಭಿಮಾನಿಗಳ ಜೊತೆ ಚರ್ಚೆ ಮಾಡಲಿದ್ದಾರೆ.
ಅಭಿಮಾನಿಗಳು ಕಾಂಗ್ರೆಸ್ ಪಕ್ಷದಲ್ಲಿನ ಅಸಮಾಧಾನದ ಜೊತೆಗೆ ಡಿಕೆ ಶಿವಕುಮಾರ್ ಬಗ್ಗೆಯೂ ಅಸಮಾಧಾನದ ಮಾತುಗಳನ್ನ ಹೇಳ್ತಿದ್ದಾರೆ. ಇನ್ನು ಎಂ.ಡಿ.ಲಕ್ಷ್ಮೀನಾರಾಯಣ್ ಬಹುತೇಕ ಬಿಜೆಪಿಗೆ ಸೇರ್ಪಡೆಯಾಗುವ ಸಾಧ್ಯತೆ ಇದೆ ಎಂದೇ ಹೇಳಲಾಗ್ತಿದೆ.
PublicNext
22/08/2022 06:11 pm