ತುಮಕೂರು ಸಿದ್ದಗಂಗಾ ಮಠಕ್ಕೆ ಇಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಭೇಟಿ ನಿಡಲಿದ್ದು, ಇದೇ ವೇಳೆ ದಾರಿ ಮಧ್ಯೆ ಸಿಗುವ ದೇವನಹಳ್ಳಿ ಮತ್ತು ದೊಡ್ಡಬಳ್ಳಾಪುರದಲ್ಲಿ ಪಕ್ಷದ ಕಾರ್ಯಕರ್ತರನ್ನು ಕುರಿತು ಭಾಷಣ ಮಾಡಲಿದ್ದಾರೆ.
ಇಂದು ಮಧ್ಯಾಹ್ನ 2.15 ಕ್ಕೆ 6E2188 ವಿಮಾನದಲ್ಲಿ ಕೆಐಎಎಲ್ ಗೆ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಆಗಮಿಸಲಿದ್ದು, ಕೆಐಎಎಲ್ ನಲ್ಲಿ ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ಸೇರಿದಂತೆ ಹಲವು ನಾಯಕರು ಸ್ವಾಗತ ಮಾಡಲಿದ್ದಾರೆ , ನಂತರ ಅವರ ದೇವನಹಳ್ಳಿ, ದೊಡ್ಡಬಳ್ಳಾಪುರ ಮಾರ್ಗದಲ್ಲಿ ತುಮಕೂರಿನ ಸಿದ್ದಗಂಗಾ ಮಠಕ್ಕೆ ತೆರಳಲಿದ್ದಾರೆ.
ತುಮಕೂರಿನ ಸಿದ್ದಗಂಗಾ ಮಠಕ್ಕೆ ತೆರಳುವ ಮಾರ್ಗಮಧ್ಯೆ ದೊಡ್ಡಬಳ್ಳಾಪುರಕ್ಕೆ ಭೇಟಿ ನೀಡುತ್ತಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ಸ್ವಾಗತಿಸಲು ದೇವನಹಳ್ಳಿ ಮತ್ತು ದೊಡ್ಡಬಳ್ಳಾಪುರದಲ್ಲಿ ವೇದಿಕೆ ಸಿದ್ಧತೆ ಮಾಡಲಾಗಿದೆ.
ದೊಡ್ಡಬಳ್ಳಾಪುರದಲ್ಲಿ ಶಾಸಕ ಟಿ.ವೆಂಕಟರಮಣಯ್ಯ ನೇತೃತ್ವದಲ್ಲಿ ಭರದ ಸಿದ್ಧತೆ ಮಾಡಲಾಗಿದ್ದು, ಟಿ.ಬಿ.ವೃತ್ತದ ಪ್ರವಾಸಿ ಮಂದಿರದ ಎದುರು ಭವ್ಯ ವೇದಿಕೆ ಸಜ್ಜುಗೊಳಿಸಲಾಗಿದೆ. ಪ್ರಮುಖ ವೃತ್ತ, ರಸ್ತೆಗಳಲ್ಲಿ ಕಾಂಗ್ರೆಸ್ ನಾಯಕರ ಸ್ವಾಗತ ಕೋರುವ ಕಟೌಟ್, ಬ್ಯಾನರ್ ಗಳು ರಾರಾಜಿಸುತ್ತಿವೆ. ರಾತ್ರಿಯಿಂದ ವೇದಿಕೆ ಸಿಧದಪಡಿಸುವ ಕಾರ್ಯವನ್ನು ಖುದ್ದು ಶಾಸಕರೇ ನಿಂತು ನೋಡಿಕೊಳ್ಳುತ್ತಿದ್ದಾರೆ.
ಪೊಲೀಸ್, ಆಂಬುಲೆನ್ಸ್, ಅಗ್ನಿಶಾಮಕ ದಳ ಹಾಗೂ ಬೆಸ್ಕಾಂ ಸಿಬ್ಬಂದಿ ಸ್ಥಳದಲ್ಲಿಯೇ ಮೊಕ್ಕಾಂ ಹೂಡಿದ್ದಾರೆ. ದೇವನಹಳ್ಳಿ ವಿಮಾನ ನಿಲ್ದಾಣದಿಂದ ಆಗಮಿಸುವ ರಾಹುಲ್ ಗಾಂಧಿ ಅವರು 15 ಭಾಷಣ ಮಾಡಲಿದ್ದಾರೆ.
ಕಾಂಗ್ರೆಸ್ ರಾಜ್ಯ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಕೃಷ್ಣ ಭೈರೇಗೌಡ, ಎಂ.ಬಿ.ಪಾಟೀಲ್ ಸೇರಿದಂತೆ ಗಣ್ಯರ ದಂಡೇ ರಾಹುಲ್ ಗಾಂಧಿ ಅವರ ಜತೆ ಆಗಮಿಸಲಿದೆ.
Kshetra Samachara
31/03/2022 12:48 pm