ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬೆಂಗಳೂರು: ಕೆ.ಎಸ್.ಈಶ್ವರಪ್ಪಗೆ ಕ್ಲೀನ್ ಚಿಟ್; ಆಪ್ ಕಾರ್ಯಕರ್ತರಿಂದ ಪ್ರೊಟೆಸ್ಟ್

ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆ ವಿಚಾರವಾಗಿ ಕೆ.ಎಸ್. ಈಶ್ವರಪ್ಪಗೆ ರಿಲೀಫ್ ಸಿಕ್ಕಿದೆ. ಹೀಗಾಗಿ ಸರ್ಕಾರದ ವಿರುದ್ಧ ಆಪ್ ಕಾರ್ಯಕರ್ತರು ಎಚ್ಚರಿಕೆ ನೀಡಲು ಮುಂದಾಗಿದ್ದಾರೆ. ಫ್ರೀಡಂ ಪಾರ್ಕ್ ನಲ್ಲಿ ಪ್ರತಿಭಟನೆ ನಡೆಸಿದ ಆಪ್ ಕಾರ್ಯಕರ್ತರು ಈಶ್ವರಪ್ಪ ವಿರುದ್ಧ ಮರು ತನಿಖೆ ನಡೆಸುವಂತೆ ಒತ್ತಾಯ ಮಾಡಿದ್ದಾರೆ.

ಇನ್ನು ಇದೇ ವೇಳೆ ಆಪ್ ಕಾರ್ಯಕರ್ತರು ಸರ್ಕಾರದ ವಿರುದ್ಧ ಫ್ಲೆಕ್ಸ್ ಹಿಡಿದು, ಘೋಷಣೆ ಕೂಗಿ ಆಕ್ರೋಶ ಹೊರಹಾಕಿದ್ದಾರೆ. ಮೃತ ಸಂತೋಷ್ ಪಾಟೀಲ್ಗೆ ನ್ಯಾಯ ಕೊಡಿಸುವಂತೆ ಆಗ್ರಹಪಡಿಸಿದ್ದಾರೆ. ಪ್ರಕರಣ ಸಂಬಂಧ ಸೂಕ್ತ ತನಿಖೆ ನಡೆಸಬೇಕು ಇಲ್ಲವಾದಲಿ ಉಗ್ರಮಟ್ಟದ ಹೋರಾಟ ಮಾಡುವುದಾಗಿ ಎಚ್ಚರಿಕೆ ನೀಡಿದ್ದಾರೆ.

Edited By :
PublicNext

PublicNext

23/07/2022 02:49 pm

Cinque Terre

24.99 K

Cinque Terre

1

ಸಂಬಂಧಿತ ಸುದ್ದಿ