ದೊಮ್ಮಸಂದ್ರ ಗ್ರಾಮಪಂಚಾಯಿತಿಯಲ್ಲಿ ಇಂದು ನಡೆದ ಅಧ್ಯಕ್ಷ ಚುನಾವಣೆಯಲ್ಲಿ ಸರಸ್ವತಿ ರಾಮಕೃಷ್ಣ ಅವಿರೋಧವಾಗಿ ಆಯ್ಕೆಯಾಗಿದ್ದಾರೆ . ಅಧ್ಯಕ್ಷ ಸ್ಥಾನಕ್ಕೆ ಆಯ್ಕೆಯಾದ ಬಿಜೆಪಿ ಬೆಂಬಲಿತ ಅಭ್ಯರ್ಥಿ ಸರಸ್ವತಿ ರಾಮಕೃಷ್ಣ ಅವರಿಗೆ ಬಿಜೆಪಿ ಮುಖಂಡರು ಕಾರ್ಯಕರ್ತರು ಸಿಹಿ ಹಂಚಿ ಸಂಭ್ರಮಾಚರಣೆ ಮಾಡಿದರು.
ಇನ್ನು ಬಿಜೆಪಿ ಕಾರ್ಯಕರ್ತರು ಹಾಗೂ ಮುಖಂಡರು ಗಳು ಪಟಾಕಿ ಸಿಡಿಸಿ ಘೋಷಣೆಗಳನ್ನು ಕೂಗುವುದರ ಮೂಲಕ ಸಂಭ್ರಮಾಚರಣೆಯನ್ನು ಮಾಡಿದರು ಇನ್ನು ಇದೇ ವೇಳೆ ಮಾತನಾಡಿದ ನೂತನ ದೊಮ್ಮಸಂದ್ರ ಗ್ರಾಮ ಪಂಚಾಯಿತಿ ಅಧ್ಯಕ್ಷರು ಮಾತನಾಡಿ ಒಬ್ಬ ಸಾಮಾನ್ಯ ಕಾರ್ಯಕರ್ತನ್ನ ಗುರ್ತಿಸಿ ಅಧ್ಯಕ್ಷ ಪಟ್ಟ ಕೊಟ್ಟಿರುವುದು ಖುಷಿ ತಂದಿದೆ. ನನ್ನ ಅಧಿಕಾರದ ಅವಧಿಯಲ್ಲಿ ಪ್ರಾಮಾಣಿಕವಾಗಿ ಕೆಲಸ ಮಾಡುತ್ತಾನೆ , ನನ್ನ ಸ್ಥಾನಕ್ಕೆ ಆಯ್ಕೆ ಮಾಡಿದ ಎಲ್ಲರಿಗೂ ಕೃತಜ್ಞತೆಯನ್ನು ಸಲ್ಲಿಸುತ್ತೇನೆ ಎಂದು ತಿಳಿಸಿದರು
ಇನ್ನು ಈ ಕಾರ್ಯಕ್ರಮದಲ್ಲಿ ಬಿಜೆಪಿ ಮುಖಂಡರು ಹಾಗೂ ಕಾರ್ಯಕರ್ತರು ಭಾಗಿಯಾಗಿದ್ದರು.
Kshetra Samachara
28/07/2022 05:12 pm