ಬೆಂಗಳೂರು: ಬೊಮ್ಮನಹಳ್ಳಿ ವಿಧಾನಸಭಾ ಕ್ಷೇತ್ರದಲ್ಲಿ ಇಂದು ಮಂಗಮ್ಮನಪಾಳ್ಯ ವಾರ್ಡ್‌ನ ಕಾರ್ಯಕರ್ತರು ಕಾಂಗ್ರೆಸ್ ಪಕ್ಷದಿಂದ ಬಿಜೆಪಿ ಪಕ್ಷಕ್ಕೆ ಸೇರ್ಪಡೆಯಾದರು. ಸೇರ್ಪಡೆ ಕಾರ್ಯಕ್ರಮದಲ್ಲಿ ಬೊಮ್ಮನಹಳ್ಳಿ ಸತೀಶ್ ರೆಡ್ಡಿ ಭಾಗಿಯಾಗಿದ್ದರು.
ಬೊಮ್ಮನಹಳ್ಳಿ ವಿಧಾನಸಭಾ ಕ್ಷೇತ್ರದಲ್ಲಿ ಮಾಡಿರುವ ಅಭಿವೃದ್ಧಿ ಕಾರ್ಯಗಳನ್ನು ಮೆಚ್ಚಿ, ಭಾರತೀಯ ಜನತಾ ಪಕ್ಷ ಸೇರ್ಪಡೆಯಾದರು, ಅವರನ್ನು ಪಕ್ಷದ ಶಾಲು ಹಾಕಿ, ಭಾವುಟ ನೀಡಿ ಆತ್ಮೀಯವಾಗಿ ಪಕ್ಷಕ್ಕೆ ಬರಮಾಡಿಕೊಳ್ಳಲಾಯಿತು.ಈ ಸಂದರ್ಭದಲ್ಲಿ ಬಿಜೆಪಿ ಮುಖಂಡರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.
Kshetra Samachara
28/07/2022 07:47 pm