ಒಂದು ಕೆರೆಯಿಂದ ಮತ್ತೊಂದು ಕೆರೆಗೆ ಲಿಂಕ್ ಇಲ್ದೇ ಇರೋದೆ ಪ್ರವಾಹಕ್ಕೆ ಮುಖ್ಯ ಕಾರಣ ಎಂದು ಪತ್ರಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿಕೆ ನೀಡಿದ್ದಾರೆ.
ಬೆಂಗಳೂರಿನಲ್ಲಿ ಮಾತನಾಡಿದ ಅವರು, ಸರ್ಕಾರ ರಾಜಕಾಲುವೆ ಒತ್ತುವರಿ ತೆರವು ಮಾಡುತ್ತೇವೆ ಎಂದು ನೆಪ ಮಾತ್ರಕ್ಕೆ ಹೇಳುತ್ತಿದೆ ಅಷ್ಟೇ.. ನನ್ನ ಅಧಿಕಾರದಲ್ಲಿ 1953 ರಾಜ ಕಾಲುವೆ ಒತ್ತುವರಿ ಇತ್ತು. 1300 ಒತ್ತುವರಿಯನ್ನ ನಮ್ಮ ಸರ್ಕಾರದಲ್ಲಿ ತೆರವು ಮಾಡಿದ್ದೆವು. ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದ ಬಳಿಕ 3 ವರ್ಷದಲ್ಲಿ 653 ರಾಜಕಾಲುವೆ ಒತ್ತುವರಿ ತೆರವು ಮಾಡಿಲ್ಲ.
ಬೊಮ್ಮನಹಳ್ಳಿ, ಮಹದೇವಪುರ, ಕೆ.ಆರ್ ಪುರಂ, ಸಿವಿ ರಾಮನ್'ನಗರ ಕ್ಷೇತ್ರದಲ್ಲಿ ಬಿಜೆಪಿ ಶಾಸಕರು ಇದ್ದಾರೆ. ಅವರು ನಮ್ಮ ಮೇಲೆ ಗೂಬೆ ಕೂರಿಸುವ ಪ್ರಯತ್ನ ಮಾಡ್ತಿದ್ದಾರೆ. ಬೆಂಗಳೂರಿನಲ್ಲಿ ಮೂರು ಜನ ಸಂಸದರು ಬಿಜೆಪಿಯವರೇ ಇದ್ದಾರೆ. ಬೋಟ್ನಲ್ಲಿ ಓಡಾಡುವ ಪರಿಸ್ಥಿತಿ ಯಾವತ್ತೂ ಬಂದಿರಲಿಲ್ಲ. ಇಂತಹ ಕೆಟ್ಟ ಪರಿಸ್ಥಿತಿಗೆ ಬಿಜೆಪಿ ಸರ್ಕಾರವೇ ಕಾರಣ ಎಂದರು.
ಬೆಂಗಳೂರು ಜನರು ಬುದ್ದಿವಂತರು ಇದ್ದಾರೆ. ಅವರಿಗೂ ಅರ್ಥ ಆಗುತ್ತೆ. ಎಂದು ಸರ್ಕಾರದ ವಿರುದ್ಧ ಗುಡುಗಿದ್ದಾರೆ.
PublicNext
09/09/2022 08:02 pm