ರಿಪೋರ್ಟ್- ರಂಜಿತಾಸುನಿಲ್..
ಬೆಂಗಳೂರು: ವಸತಿ ಹಾಗೂ ಮೂಲಸೌಲಭ್ಯ ಅಭಿವೃದ್ಧಿ ಸಚಿವ ವಿ ಸೋಮಣ್ಣ ಬೆಂಗಳೂರು ನಗರದ ಜೆ ಡಬ್ಲ್ಯೂ ಮ್ಯಾರಿಟ್ ಹೋಟೆಲ್ ಇಲ್ಲಿ ಮೂಲ ಸೌಲಭ್ಯ ಅಭಿವೃದ್ಧಿ ಇಲಾಖೆಗೆ ಸಂಬಂಧಿಸಿದಂತೆ ಸಮಗ್ರ ನಾಗರಿಕ ವಿಮಾನಯಾನ ನೀತಿಯ ಕುರಿತಂತೆ ಮೊದಲನೇ ರಾಜ್ಯಮಟ್ಟದ ಸಮಾಲೋಚನ ಕಾರ್ಯಗಾರದ ಉದ್ಘಾಟಿಸಿದ್ರು..
ಈ ಸಂದರ್ಭದಲ್ಲಿ ಮಾತನಾಡುತ್ತಾ ಮಾನ್ಯ ಸಚಿವರು ದೇಶದಲ್ಲಿ ಮೊದಲಿನಿಂದಲೂ ಕರ್ನಾಟಕ ರಾಜ್ಯವು ನಾಗರೀಕ ವಿಮಾನಯಾನ ಕ್ಷೇತ್ರದಲ್ಲಿ ಮುಂಚೂಣಿಯಲ್ಲಿದೆ. ಸಾರ್ವಜನಿಕ ಖಾಸಗಿ ಸಹಭಾಗಿತ್ವದಲ್ಲಿ ಅಭಿವೃದ್ಧಿಪಡಿಸಲಾದ ಬೆಂಗಳೂರಿನ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣವು ಜಾಗತಿಕ ಮಟ್ಟದಲ್ಲಿ ಖ್ಯಾತಿಯನ್ನು ಪಡೆದುಕೊಂಡಿದೆ. ಇದಲ್ಲದೆ ಕಲಬುರ್ಗಿ ಬೀದರ್ ಜಿಲ್ಲೆಗಳಲ್ಲಿ ವಿಮಾನ ನಿಲ್ದಾಣಗಳನ್ನು ಅಭಿವೃದ್ಧಿಪಡಿಸಿ ನಾಗರೀಕರಿಗೆ ವಿಮಾನಯಾನ ಸೌಲಭ್ಯವನ್ನು ಒದಗಿಸಲಾಗಿದೆ.
ಪ್ರಸ್ತುತ ಶಿವಮೊಗ್ಗ ವಿಜಯಪುರ ಮತ್ತು ಹಾಸನ ಜಿಲ್ಲೆಗಳಲ್ಲಿ ವಿಮಾನ ನಿಲ್ದಾಣಗಳ ಅಭಿವೃದ್ಧಿ ಕಾಮಗಾರಿಗಳು ಪ್ರಗತಿಯಲ್ಲಿವೆ.
ಅಲ್ಲದೆ ರಾಯಚೂರಿನಲ್ಲಿ 320 ಎಕರೆ ಪ್ರದೇಶದಲ್ಲಿ 186 ಕೋಟಿ ರೂಗಳ ವೆಚ್ಚದಲ್ಲಿ ವಿಮಾನ ನಿಲ್ದಾಣ ನಿರ್ಮಾಣ ಕಾರ್ಯ ಕೈಗೊಳ್ಳಲಾಗಿದೆ ಎಂದರು. ಮೈಸೂರು ವಿಮಾನ ನಿಲ್ದಾಣದ ರನ್ ವೆ ವಿಸ್ತರಣೆ ಮತ್ತು ವಿಮಾನ ನಿಲ್ದಾಣವನ್ನು ಮೇಲ್ದರ್ಜೆಗೇರಿಸುವ ಸಲುವಾಗಿ ಸುಮಾರು 240 ಎಕರೆ ಜಮೀನನ್ನು ಭೂಸ್ವಾದಿನ ಪಡಿಸಿಕೊಂಡು ಭಾರತೀಯ ವಿಮಾನ ನಿಲ್ದಾಣಗಳ ಪ್ರಾಧಿಕಾರಕ್ಕೆ ಹಸ್ತಾಂತರಿಸಲು ಕ್ರಮ ಕೈಗೊಳ್ಳಲಾಗುತ್ತಿದೆ ಎಂದರು..
Kshetra Samachara
13/07/2022 07:56 pm