ಹೊಸಕೋಟೆ: ಬೆಂಗಳೂರು ಗ್ರಾಮಾಂತರ ಜಿಲ್ಲೆ ಹೊಸಕೋಟೆ ನಗರದ ಇತಿಹಾಸ ಪ್ರಸಿದ್ಧ ಅವಿಮುಕ್ತೇಶ್ವರ ದೇವರಿಗೆ ನಾಳೆ ಬ್ರಹ್ಮರಥೋತ್ಸವ ನೆರವೇರಲಿದೆ. ಈ ಹಿನ್ನಲೆಯಲ್ಲಿ ಎಲ್ಲಾ ರಾಜಕೀಯ ಪಕ್ಷಗಳ ನಾಯಕರು ದೇವಸ್ಥಾನಕ್ಕೆ ಭೇಟಿ ನೀಡಿ ದೇವರಿಗೆ ಪೂಜೆ ಸಲ್ಲಿಸುತ್ತಿದ್ದಾರೆ. ಈಗಾಗಲೇ ಸಚಿವ ಎಂಟಿಬಿ ನಾಗರಾಜ್ ಮತ್ತು ಹೊಸಕೋಟೆ ಶಾಸಕ ಶರತ್ ಬಚ್ಚೇಗೌಡ ದೇವಸ್ಥಾನಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಿದ್ದಾರೆ. ನಾಳೆಯೇ ಜಾತ್ರೆ ಇದ್ದು ಇಂದು ಬಿಜೆಪಿಯ ಮಾಹಿತಿ ತಂತ್ರಜ್ಞಾನ ಸಚಿವ ಅಶ್ವತ್ಥನಾರಾಯಣ ಇಂದು ಹೊಸಕೋಟೆಯ ದೇವಸ್ಥಾನಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಿದರು.
ನಾಳೆ ಹೊಸಕೋಟೆ ನಗರದಲ್ಲಿ ಅವಿಮುಕ್ತೇಶ್ವರ ಬ್ರಹ್ಮರಥೋತ್ಸವ ವಿಜೃಂಭಣೆಯಿಂದ ಜರುಗಲಿದೆ. ಈ ಹಿನ್ನೆಲೆಯಲ್ಲಿ ಸಚಿವ ಅಶ್ವತ್ಥನಾರಾಯಣ ಇಂದು ಅವಿಮುಕ್ತೇಶ್ವರ ದೇವಾಲಯಕ್ಕೆ ಭೇಟಿ ನೀಡಿ ತಮ್ಮ ಬೆಂಬಲಿಗರೊಂದಿಗೆ ಪೂಜೆ ಸಲ್ಲಿಸಿದರು. ಈ ವೇಳೆ ಜೆಡಿಎಸ್‌ನ ಜನತಾ ಜಲಧಾರೆ ಬಗ್ಗೆ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದರು. ರಾಜಕೀಯ ಪಕ್ಷಗಳು ಸಂಘಟನೆ ಮಾಡ್ತಾ ಇರ್ತಾರೆ. ಬಿಜೆಪಿ ಪಕ್ಷಕ್ಕೆ ಜನರ ಆಶೀರ್ವಾದ ಇದೆ. ಜನ ಮೋದಿ ಜೊತೆ ಬಿಜೆಪಿ ಪಕ್ಷದ ಜೊತೆ ಇದ್ದಾರೆ ಎಂಬ ವಿಶ್ವಾಸ ವ್ಯಕ್ತಪಡಿಸಿದರು.
ಈಗಾಗಲೇ ಹೊಸಕೋಟೆ ರಾಜಕೀಯವಾಗಿ ಜಿದ್ದಾಜಿದ್ದಿಗೆ ಹೆಸರಾಗಿ ಚುನಾವಣಾ ಚದುರಂಗವಾಗಿ ಮಾರ್ಪಟ್ಟಿದೆ. ಪ್ರತಿಯೊಬ್ಬರು ಒಂದಲ್ಲ ಒಂದು ವಿಧವಾಗಿ ಜನರನ್ನು ತಲುಪಲು ಹಬ್ಬ ಜಾತ್ರೆ ಉತ್ಸವಗಳಲ್ಲಿ ತೊಡಗಿ ಜನರನ್ನು ತಲುಪಲು ಪ್ರಯತ್ನಿಸುತ್ತಿದ್ದಾರೆ. ಏನೇ ಆಗಲಿ ಹೊಸಕೋಟೆಯ ಚುನಾವಣೆ ಕಾವು ದಿನೇ ದಿನೇ ಜೋರಾಗ್ತಲೇ ಇದೆ.
ಸುರೇಶ್ ಬಾಬು, ಪಬ್ಲಿಕ್ ನೆಕ್ಸ್ಟ್, ಹೊಸಕೋಟೆ.
Kshetra Samachara
15/05/2022 07:01 pm