ಬೆಂಗಳೂರು:ಇತ್ತೀಚೆಗೆ ಮೃತಪಟ್ಟಿದ್ದ ಕೊಳದ ಮಠದ ಶಾಂತವೀರ ಸ್ವಾಮೀಜಿಯ ಸಾವಿನ ಸುತ್ತ ಅನುಮಾನದ ಹುತ್ತ ಹುಟ್ಟಿಕೊಂಡಿದೆ. ಆ ಒಂದು ದೂರು ಮಠದ ಬಹುಕೋಟಿ ಆಸ್ತಿ ವಿಚಾರವನ್ನು ಮುನ್ನೆಲೆಗೆ ತಂದಿದೆ.
ಶಾಂತವೀರ ಸ್ವಾಮೀಜಿಯ ಸಾವಿನ ಬಗ್ಗೆ ಅನುಮಾನ ವ್ಯಕ್ತಪಡಿಸಿರುವ ಅವರ ಕುಟುಂಬಸ್ಥರು ಈ ಬಗ್ಗೆ ಮುಖ್ಯಮಂತ್ರಿಗಳ ಕಚೇರಿಗೆ ಲಿಖಿತ ದೂರು ನೀಡಿದ್ದಾರೆ.
ದೂರಿನಲ್ಲಿ ಸ್ವಾಮೀಜಿಗೆ ತಮ್ಮ ಸುತ್ತ ಇದ್ದವರಿಂದಲೇ ಭೀತಿಯಿತ್ತು ಎಂದು ಉಲ್ಲೇಖಿಸಿದ್ದಾರೆ. ಜೊತೆಗೆ ಹೃದಯಾಘಾತದಿಂದ ತೀರಿಕೊಂಡಿದ್ದರೆ ಪೋಸ್ಟ್ ಮಾರ್ಟಂ ಯಾಕೆ ಮಾಡಿಲ್ಲ ಎಂದು ಪ್ರಶ್ನಿಸಿದ್ದು, ಸ್ವಾಮೀಜಿ ಸಾವಿನ ಬಗ್ಗೆ ಗಂಭೀರ ತನಿಖೆ ನಡೆಸುವಂತೆ ಕುಟುಂಬಸ್ಥರು ಆಗ್ರಹಿಸಿದ್ದಾರೆ.
Kshetra Samachara
20/05/2022 02:56 pm