ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬೆಂಗಳೂರು: ಶ್ರೀ ಸೋಮೇಶ್ವರ ಮೂರ್ತಿ ಪ್ರತಿಷ್ಠಾಪನೆ, ಕುಂಭಾಭಿಷೇಕ ಮಹೋತ್ಸವ

ವರದಿ: ಬಲರಾಮ್ ವಿ.

ಬೆಂಗಳೂರು: ಬೆಂಗಳೂರು ಪೂರ್ವ ತಾಲೂಕಿನ ಕೆಆರ್ ಪುರದ ಅಂಬೇಡ್ಕರ್ ನಗರದಲ್ಲಿ ಶ್ರೀ ಸೋಮೇಶ್ವರ ಮೂರ್ತಿ ಪ್ರತಿಷ್ಠಾಪನೆ ಹಾಗೂ ಕುಂಭಾಭಿಷೇಕ ಮಹೋತ್ಸವ ವಿಜೃಂಭಣೆಯಿಂದ ಜರುಗಿತು.

ಮೂರು ದಿನಗಳಿಂದ ನಡೆಯುತ್ತಿರುವ ಈ ಕಾರ್ಯಕ್ರಮದಲ್ಲಿ ನೂರಾರು ಸಾರ್ವಜನಿಕರು ಭಾಗವಹಿಸಿದ್ದರು. ಇಂದು ಕೊನೆ ದಿನದಂದು ಚಿತ್ರದುರ್ಗದ ಭೋವಿ ಮಠದ ಶ್ರೀ ಸಿದ್ಧರಾಮೇಶ್ವರ ಮಹಾಸ್ವಾಮೀಜಿ ಹಾಗೂ ನಗರಾಭಿವೃದ್ಧಿ ಸಚಿವ ಬೈರತಿ ಬಸವರಾಜ ಭಾಗವಹಿಸಿ ವಿಶೇಷ ಪೂಜೆಯಲ್ಲಿ ಭಾಗವಹಿಸಿದರು.

ಬಳಿಕ ಮಾತನಾಡಿದ ಶ್ರೀ ಸಿದ್ಧರಾಮೇಶ್ವರ ಮಹಾಸ್ವಾಮೀಜಿ, ಜಗತ್ತಿನಲ್ಲಿ ಎಲ್ಲರಿಗೂ ಒಳಿತನ್ನೇ ಬಯಸುವ ಶಿವನ ದೇವಾಲಯ ಲೋಕಾರ್ಪಣೆಗೊಂಡಿರುವುದು ಸಂತಸದಾಯಕ. ದೇವಾಲಯ ಮಾಡಿಕೊಂಡ ಜನರು ದೇಹವನ್ನು ಕೂಡ ದೇವಾಲಯವನ್ನಾಗಿ ರೂಪಿಸಿಕೊಳ್ಳಬೇಕೆಂದರು.

ಸಚಿವ ಬೈರತಿ ಬಸವರಾಜ್‌ ಮಾತನಾಡಿ, ಕ್ಷೇತ್ರದಲ್ಲಿ ಇರುವ ಪ್ರತಿ ದೇವಸ್ಥಾನವನ್ನು ಜೀರ್ಣೋದ್ಧಾರ ಮಾಡಲಾಗುತ್ತಿದೆ ಎಂದರು.

ಗ್ರಾಮದ ಮುಖಂಡ ಆನಂದ್ ಮಾತನಾಡಿದರು.

Edited By :
Kshetra Samachara

Kshetra Samachara

21/08/2022 09:01 pm

Cinque Terre

2.39 K

Cinque Terre

0

ಸಂಬಂಧಿತ ಸುದ್ದಿ