ಬೆಂಗಳೂರು: 'ಬೆಂಗಳೂರು ಟೆಕ್ ಶೃಂಗ 2021' ಇದೇ ನವೆಂಬರ್ 17ರಿಂದ ಆರಂಭವಾಗಲಿದೆ. `ಡ್ರೈವಿಂಗ್ ದಿ ನೆಕ್ಸ್ಟ್’ ಎಂಬ ಘೋಷವಾಕ್ಯದಡಿ ಈ ಕಾರ್ಯಕ್ರಮ ನಡೆಯಲಿದೆ. ಉಪರಾಷ್ಟ್ರಪತಿ ಎಂ.ವೆಂಕಯ್ಯ ನಾಯ್ಡು 'ಬೆಂಗಳೂರು ತಂತ್ರಜ್ಞಾನ ಶೃಂಗ'ವನ್ನು ಉದ್ಘಾಟಿಸಲಿದ್ದಾರೆ ಎಂದು ಐ.ಟಿ ಬಿಟಿ ಹಾಗೂ ವಿಜ್ಞಾನ-ತಂತ್ರಜ್ಞಾನ ಸಚಿವ ಡಾ.ಸಿ.ಎನ್.ಅಶ್ವತ್ಥನಾರಾಯಣ ಹೇಳಿದ್ದಾರೆ.
ಬಿಟಿಎಸ್-2021ರ ಸಂಬಂಧಿಸಿದಂತೆ ಮಂಗಳವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು,
ನಗರದ ಖಾಸಗಿ ಹೋಟೆಲ್‌ನಲ್ಲಿ ಹೈಬ್ರಿಡ್ ಮಾದರಿಯಲ್ಲಿ ನಡೆಯಲಿರುವ ಈ ಶೃಂಗದಲ್ಲಿ 30ಕ್ಕೂ ಹೆಚ್ಚು ದೇಶಗಳು ಪಾಲ್ಗೊಳ್ಳಲಿವೆ. ಇಸ್ರೇಲ್ ಪ್ರಧಾನಿ ನಫ್ತಾಲಿ ಬೆನೆಟ್, ಆಸ್ಟ್ರೇಲಿಯಾ ಪ್ರಧಾನಿ ಸ್ಕಾಟ್ ಮಾರಿಸನ್ ಮತ್ತು ದಾವೋಸ್‌ನಲ್ಲಿರುವ ವಿಶ್ವ ಆರ್ಥಿಕ ವೇದಿಕೆಯ ಮುಖ್ಯಸ್ಥರು ಸೇರಿದಂತೆ ಹಲವು ಗಣ್ಯರು ಸಮಾವೇಶಕ್ಕೆ ಸಾಕ್ಷಿಯಾಗಲಿದ್ದಾರೆ ಎಂದು ಮಾಹಿತಿ ನೀಡಿದ್ದಾರೆ.
`ಸುಧಾರಣೆ- ಪರಿವರ್ತನೆ- ಸಾಧನೆ’ಯ ಪರಿಕಲ್ಪನೆಯಲ್ಲಿ ನಡೆಯುತ್ತಾ ಬಂದಿರುವ ಬಿಟಿಎಸ್‌ನ 24ನೇ ಆವೃತ್ತಿಯ ಶೃಂಗದಲ್ಲಿ 75ಕ್ಕೂ ಹೆಚ್ಚು ಗೋಷ್ಠಿಗಳು ನಡೆಯಲಿವೆ. 300ಕ್ಕೂ ಹೆಚ್ಚು ಮುಂಚೂಣಿ ಕಂಪನಿಗಳು ಈ ಶೃಂಗಮೇಳದಲ್ಲಿ ಭಾಗವಹಿಸಲಿದ್ದು, 5 ಸಾವಿರಕ್ಕೂ ಅಧಿಕ ನವೋದ್ಯಮಗಳು ಪಾಲ್ಗೊಳ್ಳಲಿವೆ, 20 ಸಾವಿರಕ್ಕೂ ಹೆಚ್ಚು ವಾಣಿಜ್ಯ ಪ್ರತಿನಿಧಿಗಳು ಸಕ್ರಿಯರಾಗಿ ಭಾಗವಹಿಸಲಿದ್ದು, ಒಟ್ಟಿನಲ್ಲಿ 5 ಲಕ್ಷ ತಾಂತ್ರಿಕೋದ್ಯಮ ಆಸಕ್ತರನ್ನು ತಲುಪಲಿದೆ ಎಂದು ಅವರು ವಿವರಿಸಿದರು.
Kshetra Samachara
10/11/2021 10:24 am