ಬೆಂಗಳೂರು: ಫಿಬಾ 18 ವರ್ಷದೊಳಗಿನ ಮಹಿಳಾ ಏಷಿಯನ್ ಚಾಂಪಿಯನ್ ಶಿಪ್ 2022 ಕ್ರೀಡೆ ಯನ್ನು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರೊಂದಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ವೀಕ್ಷಿಸಿದರು.
ಶ್ರೀ ಕಂಠೀರವ ಒಳಾಂಗಣ ಕ್ರೀಡಾಂಗಣದಲ್ಲಿ ಚೀನಾ ಮತ್ತು ಆಸ್ಟ್ರೇಲಿಯಾ ನಡುವೆ ನಡೆದ ಪಂದ್ಯದಲ್ಲಿ ಆಸ್ಟ್ರೇಲಿಯಾ ಜಯಗಳಿಸಿದ್ದು ಪ್ರಶಸ್ತಿ ಪ್ರದಾನ ಮಾಡಲಾಯಿತು. ಯುವ ಸಬಲೀಕರಣ ಮತ್ತು ಕ್ರೀಡಾ ಸಚಿವ ನಾರಾಯಣ ಗೌಡ, ಉನ್ನತ ಶಿಕ್ಷಣ ಸಚಿವ ಅಶ್ವತ್ಥ್ ನಾರಾಯಣ್, ಭಾರತೀಯ ಒಲಂಪಿಕ್ ಅಸೋಸಿಯೇಷನ್ ಉಪಾಧ್ಯಕ್ಷ ಹಾಗೂ ವಿಧಾನ ಪರಿಷತ್ ಸದಸ್ಯ ಗೋವಿಂದರಾಜು ಉಪಸ್ಥಿತರಿದ್ದರು.
PublicNext
11/09/2022 10:51 pm