ಬೆಂಗಳೂರು: ಡಿಕೆಶಿ ದೊಡ್ಡ ಡೀಲ್ ಗಿರಾಕಿ ಎಂದು ಮಾತನಾಡಿದ ಕೆಪಿಸಿಸಿ ಮಾಧ್ಯಮ ಸಂಯೋಜಕ ಎಂ.ಎ.ಸಲೀಂ ಅವರ ಹೇಳಿಕೆ ಬಿಜೆಪಿಗೆ ಅಸ್ತ್ರವಾದ ವಿಚಾರಕ್ಕೆ ಸಂಬಂಧಿಸಿದಂತೆ ಡಿಕೆಶಿ ಪ್ರತಿಕ್ರಿಯೆ ಕೊಟ್ಟಿದ್ದಾರೆ.
ಈ ಸಂಬಂಧ ಮಾಧ್ಯಮಗಳ ಜೊತೆ ಮಾತನಾಡಿದ ಕನಕಪುರದ ಬಂಡೆ ಯಡಿಯೂರಪ್ಪ ವಿರುದ್ಧ ಅವರ ಪಕ್ಷದವರು ಮಾತನಾಡಿಲ್ವಾ? ಯಡಿಯೂರಪ್ಪ, ವಿಜಯೇಂದ್ರ, ಅವರ ಕುಟುಂಬದ ಬಗ್ಗೆ ಮಾತನಾಡಿದ್ದರು. ಯತ್ನಾಳ್, ಹೆಚ್.ವಿಶ್ವನಾಥ್ ಆರೋಪ ಮಾಡಿದ್ದರು. ರಮೇಶ್ ಜಾರಕಿಹೊಳಿ ಮಂಚದಲ್ಲೇ ಮಾತನಾಡಿದ್ದರು.
ಸಿ.ಪಿ.ಯೋಗೇಶ್ವರ್ ಕೂಡ ಭ್ರಷ್ಟಾಚಾರದ ಬಗ್ಗೆ ಮಾತನಾಡಿದ್ದರು. ಆಗ ಬಿಜೆಪಿ ನಾಯಕರ ಧ್ವನಿ ಬಿದ್ದುಹೋಗಿತ್ತಾ? ಯಾಕೆ ಅವರ ಮುಖಂಡರ ಬಗ್ಗೆ ಮಾತನಾಡಲಿಲ್ಲ? ತಮ್ಮ ನಾಯಕರ ಭ್ರಷ್ಟಾಚಾರದ ಬಗ್ಗೆ ಸ್ವರವೇ ಬರಲಿಲ್ಲ ಎಂದು ಕಿಡಿಕಾರಿದ್ದಾರೆ.
Kshetra Samachara
14/10/2021 07:55 pm