ಬೆಂಗಳೂರು: ದಕ್ಷಿಣ ಭಾರತ ಪ್ರವಾಸೋದ್ಯಮಗಳ ಕಾರ್ಯಕ್ರಮದಲ್ಲಿ ಕನ್ನಡ ಬಳಕೆ ಮಾಡದಿರುವ ಬಗ್ಗೆ ಸಚಿವ ಆನಂದ ಸಿಂಗ್ ಗರಂ ಆಗಿದ್ದರು. ಕಾರ್ಯಕ್ರಮದಿಂದ ಹೊರಬಂದ ಅವರು ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ಕೇಂದ್ರ ಪ್ರವಾಸೋದ್ಯಮ ಅಧಿಕಾರಿಗಳನ್ನೂ ಪ್ರಶ್ನಿಸಿದ ಆನಂದ್ ಸಿಂಗ್, ಕರ್ನಾಟಕದಲ್ಲಿ ರೂಲ್ಸ್ ಇದೆ. ನಮ್ಮ ಆಡಳಿತ ಭಾಷೆ ಕನ್ನಡ ಎಂದಿದ್ದಾರೆ. ಸರ್ಕಾರದ ಕಾರ್ಯಕ್ರಮಗಳಲ್ಲಿ ಕನ್ನಡ ಕಡ್ಡಾಯ ಮಾಡಲಾಗಿದೆ ಎಂದು ಅಧಿಕಾರಿಗಳಿಗೆ ಆನಂದ ಸಿಂಗ್ ಎಚ್ಚರಿಕೆ ನೀಡಿದ್ದಾರೆ.
Kshetra Samachara
28/10/2021 05:25 pm