ವರದಿ: ಗಣೇಶ್ ಹೆಗಡೆ
ಬೆಂಗಳೂರು: ಅಕಾಲಿಕ ಮಳೆಯಿಂದ ಆಗಿರುವ ಹಾನಿ ಹಾಗೂ ಕೈಗೊಂಡಿರುವ ಪರಿಹಾರ ಕ್ರಮಗಳ ಕುರಿತು ಎಲ್ಲ ಜಿಲ್ಲಾಡಳಿತಗಳೊಂದಿಗೆ ಸಿಎಂ ಬಸವರಾಜ ಬೊಮ್ಮಾಯಿ ವೀಡಿಯೊ ಸಂವಾದ ನಡೆಸಿದರು.
ಗೃಹ ಕಚೇರಿ 'ಕೃಷ್ಣಾ'ದಲ್ಲಿ ನಡೆದ ಸಭೆಯಲ್ಲಿ ಎಲ್ಲ ಜಿಲ್ಲೆಗಳ ಜಿಲ್ಲಾಧಿಕಾರಿಗಳು ಮತ್ತು ಜಿಪಂ ಮುಖ್ಯ ಕಾರ್ಯ ನಿರ್ವಾಹಕ ಅಧಿಕಾರಿಗಳು, ಸಚಿವರಾದ ಆರ್ .ಅಶೋಕ್, ಸೋಮಣ್ಣ ಮತ್ತಿತರರು ಭಾಗಿಯಾಗಿದ್ದರು.
ಆ ಸಂದರ್ಭ ಮಳೆ ಹಾನಿ ಬಗ್ಗೆ ಸಿಎಂ ಮಾಹಿತಿ ಪಡೆದರು.
ಕುಸಿಯುವ ಸ್ಥಿತಿಯಲ್ಲಿರುವ ಮನೆಗಳಲ್ಲಿನ ಕುಟುಂಬಗಳ ಸ್ಥಳಾಂತರ ಮಾಡಬೇಕು. ತುರ್ತು ಕಾರ್ಯಾಚರಣೆಗೆ ಸದಾ ಸನ್ನದ್ಧವಾಗಿರಬೇಕು ಎಂದು ಸೂಚನೆ ನೀಡಿದ್ದು, ಬೆಳೆ ಹಾನಿ ಕುರಿತು ವರದಿ ನೀಡುವಂತೆ ನಿರ್ದೇಶನ ನೀಡಿದ್ದಾರೆ.
ನೀತಿ ಸಂಹಿತೆ ಜಾರಿಯಿದ್ದ ಹಿನ್ನೆಲೆಯಲ್ಲಿ ಸಭೆ ತಡವಾಗಿ ಆರಂಭವಾಗಿತ್ತು.
Kshetra Samachara
19/11/2021 08:17 pm