ಬೆಂಗಳೂರು: ಯಲಹಂಕ ಶಾಸಕ ಎಸ್.ಆರ್ ವಿಶ್ವನಾಥ್ ಹತ್ಯೆ ಖಂಡಿಸಿ ಮಾದನಾಯಕನಹಳ್ಳಿಯಲ್ಲಿ ನೂರಾರು ಬಿಜೆಪಿ ಕಾರ್ಯಕರ್ತರ ಪ್ರತಿಭಟನೆ, ನಡೆಸಿದರು.
ತುಮಕೂರು-ಬೆಂಗಳೂರು ಹೆದ್ದಾರಿ ಬಂದ್ ಮಾಡಿದ ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಪ್ರಕರಣದ ಆರೋಪಿ ಗೋಪಾಲಕೃಷ್ಣ ಪ್ರತಿಕೃತಿ ದಹಿಸಿ ಕಾರ್ಯಕರ್ತರು ಬಿಗಿ ಕಾನೂನು ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದ್ದಾರೆ. ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ವಿರುದ್ಧ ಘೋಷಣೆ ಕೂಗಿದ್ದಾರೆ. ಪ್ರತಿಭಟನೆ ವೇಳೆ ಸೀಮೆಎಣ್ಣೆ ಸುರಿದುಕೊಂಡು ಬೆಂಕಿ ಹಚ್ಚಿಕೊಳ್ಳಲು ಮುಂದಾದ ಅಂಚೆಪಾಳ್ಯದ ಗೋಪಾಲ್ ಎಂಬಾತನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
Kshetra Samachara
02/12/2021 02:44 pm