ಆನೇಕಲ್: ದೇಶವ್ಯಾಪಿ ನಡೆಯುತ್ತಿರುವ ಕಟ್ಟಡ ಕಾರ್ಮಿಕರ ಮುಷ್ಕರಕ್ಕೆ ಬೆಂಬಲ ಸೂಚಿಸಿ ಬೆಂಗಳೂರು ಹೊರವಲಯದ ಆನೇಕಲ್ ನಲ್ಲಿ ಕಟ್ಟಡ ಕಾರ್ಮಿಕರು ಹಾಗೂ ಇತರ ನಿರ್ಮಾಣ ಕಾರ್ಮಿಕರ ಫೆಡರೇಶನ್ ವತಿಯಿಂದ ಪಟ್ಟಣದಲ್ಲಿ ಪ್ರತಿಭಟನೆ rally ನಡೆಯಿತು.
ಬಳಿಕ ಆನೇಕಲ್ ತಾಲೂಕು ಕಚೇರಿ ಮುಂಭಾಗ ಪ್ರತಿಭಟನೆ ಸಭೆ ಜರುಗಿತು. 200ಕ್ಕೂ ಅಧಿಕ ಮಂದಿ ಕಟ್ಟಡ ಹಾಗೂ ಇತರ ನಿರ್ಮಾಣ ಕಾರ್ಮಿಕರು ಪ್ರತಿಭಟನೆಯಲ್ಲಿ ಭಾಗವಹಿಸಿದರು.
ಈ ಸಂದರ್ಭ ಆನೇಕಲ್ ದಂಡಾಧಿಕಾರಿ ದಿನೇಶ್ ಅವರಿಗೆ ತಮ್ಮ ಬೇಡಿಕೆಗಳನ್ನು ಶೀಘ್ರ ಈಡೇರಿಸುವಂತೆ ಮನವಿ ಪತ್ರ ಅರ್ಪಿಸಲಾಯಿತು. ಬಸ್ ಪಾಸ್ ಸಹಾಯಧನ, ಕಟ್ಟಡ ಕಾರ್ಮಿಕರ ಕಲ್ಯಾಣ ನಿಧಿ ಸೇರಿದಂತೆ ಹಲವು ರೀತಿಯಲ್ಲಿ ಕಟ್ಟಡ ಕಾರ್ಮಿಕರಿಗೆ ಅನ್ಯಾಯವಾಗುತ್ತಿದ್ದು, ಇದನ್ನು ಸರಕಾರ ಈ ಕೂಡಲೇ ಸರಿಪಡಿಸಿ ತಮಗೆ ಬೇಕಾದ ಎಲ್ಲ ಸೌಲಭ್ಯ ಒದಗಿಸಬೇಕು, ಇಲ್ಲದಿದ್ದರೆ ಮುಂದಿನ ದಿನಗಳಲ್ಲಿ ಉಗ್ರ ಹೋರಾಟ ಮಾಡುತ್ತೇವೆ ಎಂದು ಪ್ರತಿಭಟನಾಕಾರರು ಸರಕಾರಕ್ಕೆ ಎಚ್ಚರಿಕೆಯನ್ನೂ ನೀಡಿದ್ದಾರೆ.
Kshetra Samachara
02/12/2021 07:58 pm