ವರದಿ - ಗಣೇಶ್ ಹೆಗಡೆ
ಬೆಂಗಳೂರು -ರಾಜ್ಯದ ವಿವಿಧ ಇಲಾಖೆಗಳಲ್ಲಿ ನಡೆಯುತ್ತಿರುವ ವ್ಯಾಪಕ ಭ್ರಷ್ಟಾಚಾರವನ್ನು ನಿಯಂತ್ರಿಸುವಂತೆ ಆಗ್ರಹಿಸಿ ಸರಕಾರದ ಮೇಲೆ ಒತ್ತಡ ಹೇರಲು 2022ರ ಜನವರಿ ತಿಂಗಳಲ್ಲಿ ಬೆಂಗಳೂರಿನಲ್ಲಿ ಸುಮಾರು 1 ಲಕ್ಷ ಗುತ್ತಿಗೆದಾರರ ಬೃಹತ್ ಪ್ರತಿಭಟನೆ ನಡೆಸುವುದಾಗಿ ಕರ್ನಾಟಕ ಸ್ಟೇಟ್ ಕಂಟ್ರಾಕ್ಟರ್ಸ್ ಅಸೋಸಿಯೇಷನ್(ಕೆಎಸ್‌ಸಿಎ) ತಿಳಿಸಿದೆ.
ಕಳೆದ ಹಲವು ವರ್ಷಗಳಿಂದ ಭ್ರಷ್ಟಾಚಾರವನ್ನು ಕೊನೆಗಾಣಿಸುವಂತೆ ಎಲ್ಲ ಸರಕಾರಗಳಿಗೂ ಮನವಿ ಮಾಡಿಕೊಳ್ಳುತ್ತಿದ್ದರೂ ಯಾವುದೇ ಪ್ರಯೋಜನವಾಗಿಲ್ಲ. ಆದ್ದರಿಂದ ಹೋರಾಟದ ಹಾದಿ ಅನಿವಾರ್ಯ ಎಂದು ಅಸೋಸಿಯೇಷನ್ ತಿಳಿಸಿದೆ.
ಟೆಂಡರ್ ಪ್ರಕ್ರಿಯೆ ಕುರಿತು ತನಿಖೆಗೆ ಅದೇಶಿಸಿರುವ ಸರಕಾರದ ನಿಲುವನ್ನು ಸ್ವಾಗತಿಸಿರುವ ಕೆಎಸ್‌ಸಿಎ ಭ್ರಷ್ಟಾಚಾರ ಕುರಿತು
ಉನ್ನತ ಮಟ್ಟದ ತನಿಖೆ ನಡೆಸಬೇಕು ಒತ್ತಾಯಿಸಿದ್ದಾರೆ.
Kshetra Samachara
13/12/2021 06:29 pm