ದೇವನಹಳ್ಳಿ: ಬೆಂಗಳೂರು ಗ್ರಾಮಾಂತರ ಜಿಲ್ಲೆ ಸ್ಥಳೀಯ ಸಂಸ್ಥೆಗಳ ವಿಧಾನ ಪರಿಷತ್ ಚುನಾವಣೆಯ ಮತಗಳ ಎಣಿಕೆ ಕಾರ್ಯ ದೇವನಹಳ್ಳಿ ಪಟ್ಟಣದ ಇಂಟರ್ ನ್ಯಾಷನಲ್ ಸ್ಕೂಲ್ ಆವರಣದಲ್ಲಿ ಪ್ರಾರಂಭವಾಗಿದೆ. ಬೆಂಗಳೂರು ಗ್ರಾಮಾಂತರ ಸ್ಥಳೀಯ ಸಂಸ್ಥೆಗಳ ಕ್ಷೇತ್ರದ ಚುನಾವಣಾ ವೀಕ್ಷಕ ಶಿವಯೋಗಿ ಕಳಸದ್, ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಕೆ.ಶ್ರೀನಿವಾಸ್, ರಾಮನಗರ ಜಿಲ್ಲಾಧಿಕಾರಿ ರಾಕೇಶ್ ಕುಮಾರ್ ವಿವಿಧ ಪಕ್ಷಗಳ ಏಜೆಂಟರುಗಳು ಹಾಗೂ ಇತರೆ ಅಧಿಕಾರಿಗಳ ಸಮ್ಮುಖದಲ್ಲಿ ಮತಪೆಟ್ಟಿಗೆಗಳನ್ನು ಇರಿಸಲಾಗಿದ್ದ, ಸ್ಟ್ರಾಂಗ್ ರೂಂ ತೆರೆಯಲಾಗಿದ್ದು ಮತಗಳ ಎಣಿಕೆ ಕಾರ್ಯ ಪ್ರಾರಂಭವಾಗಿದೆ.
ಮತ ಎಣಿಕೆ ಕಾರ್ಯಕ್ಕಾಗಿ 14 ಟೇಬಲ್‌ಗಳನ್ನು ಹಾಕಲಾಗಿದೆ. ಪ್ರತಿ ಟೇಬಲ್‌ಗೆ ಇಬ್ಬರು ಸಿಬ್ಬಂದಿಗಳಂತೆ ಒಟ್ಟು 28 ಸಿಬ್ಬಂದಿಗಳು ಮತ ಎಣಿಕೆ ಕಾರ್ಯಕ್ಕೆ ನಿಯೋಜನೆ ಮಾಡಲಾಗಿದೆ. ಮತ ಎಣಿಕೆ ಕೇಂದ್ರದ ಸುತ್ತ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ. ಕಾಂಗ್ರೆಸ್ ಪಕ್ಷದಿಂದ ಎ.ರವಿ, ಜೆಡಿಎಸ್ ಪಕ್ಷದಿಂದ ರಮೇಶ್ ಗೌಡ, ಮತ್ತು ಬಿಜೆಪಿ ಪಕ್ಷದಿಂದ ಬಿ.ಸಿ. ನಾರಾಯಣಸ್ವಾಮಿ ಚುನಾವಣಾ ಕಣದಲ್ಲಿದ್ದಾರೆ.
Kshetra Samachara
14/12/2021 09:06 am