ಕೆ.ಆರ್. ಪುರಂ: ಕನ್ನಡದ ಬಾವುಟ ಸುಟ್ಟು ಹಾಕಿರುವ ಕಿಡಿಗೇಡಿ ಎಂಇಎಸ್ ಹಾಗೂ ಶಿವಸೇನೆಯನ್ನು ನಿಷೇಧಿಸುವಂತೆ ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಕರ್ತರು ಕೆ.ಆರ್. ಪುರಂನ ಬಿಬಿಎಂಪಿ ಕಚೇರಿ ಎದುರು ರಾಷ್ಟೀಯ ಹೆದ್ದಾರಿ ತಡೆದು ಬೃಹತ್ ಪ್ರತಿಭಟನೆ ನಡೆಸಿ, ಶಿವಸೇನೆ ವರಿಷ್ಠ ಉದ್ಧವ್ ಠಾಕ್ರೆ ಪ್ರಕೃತಿ ದಹಿಸಿ ಆಕ್ರೋಶ ವ್ಯಕ್ತಪಡಿಸಿದರು.
ಬಳಿಕ ಮಾತನಾಡಿದ ರಾಜ್ಯ ಉಪಾಧ್ಯಕ್ಷ ಶಿವರಾಜ್ ಗೌಡ, ಶಿವಸೇನೆ ಹಾಗೂ ಎಂಇಎಸ್ ಪುಂಡರು ಕನ್ನಡ ಬಾವುಟ ಸುಟ್ಟಿದ್ದಾರೆ. ಆದರೂ ರಾಜ್ಯ ಸರ್ಕಾರ ಯಾವುದೇ ಕ್ರಮ ಕೈಗೊಳ್ಳದಿರುವುದು ಕನ್ನಡಿಗರಿಗೆ ಮಾಡಿದ ಅವಮಾನ. ಬೆಳಗಾವಿಯ ರಾಜಕಾರಣಿಗಳು ವೋಟ್ ಬ್ಯಾಂಕ್ ಆದ ಅವರ ವಿರುದ್ಧ ಯಾವುದೇ ಕ್ರಮಗೊಳ್ಳುತ್ತಿಲ್ಲ. ಪ್ರಧಾನಿಗಳು, ಮಹಾರಾಷ್ಟ್ರ ಮುಖ್ಯಮಂತ್ರಿ ಸ್ಥಾನದಿಂದ ಉದ್ಧವ್ ಠಾಕ್ರೆಯನ್ನು ವಜಾಗೊಳಿಸುವಂತೆ ಆಗ್ರಹಿಸಿದರು.
ನಂತರ ಕೆ.ಆರ್. ಪುರಂ ಕರವೇ ಉಪಾಧ್ಯಕ್ಷ ಕೃಷ್ಣಮೂರ್ತಿ ಮಾತನಾಡಿ, 7 ಕೋಟಿ ಕನ್ನಡಿಗರ ಸಂಕೇತವಾದ ಕನ್ನಡದ ಬಾವುಟ ಸುಟ್ಟು ಸಮಸ್ತ ಕನ್ನಡಿಗರ ಆತ್ಮಾಭಿಮಾನಕ್ಕೆ ಧಕ್ಕೆ ತರಲಾಗಿದೆ. ಈ ಪುಂಡರಿಗೆ ಮಸಿ ಬಳಿದ ಕನ್ನಡ ಪರ ಹೋರಾಟಗಾರ ಸಂಪತ್ ಕುಮಾರ್ ದೇಸಾಯಿ ಅವರನ್ನು ಕೂಡಲೇ ಬಿಡುಗಡೆಗೊಳಿಸುವಂತೆಯೂ ಆಗ್ರಹಿಸಿದರು.
Kshetra Samachara
17/12/2021 04:48 pm