ಬೆಂಗಳೂರು: ಮಾಜಿ ಸಚಿವ ಆರ್.ಎಲ್.ಜಾಲಪ್ಪ ಅವರ ಪಾರ್ಥೀವ ಶರೀರವನ್ನ ಇಂದು ಬೆಂಗಳೂರು ಗ್ರಾಮಾಂತರ ಜಿಲ್ಲೆ ದೊಡ್ಡಬಳ್ಳಾಪುರ ತಾಲೂಕಿನ ಸ್ವಗ್ರಾಮದ ತೂಬರೆಎಯಲ್ಲಿ ಅಂತಿಮ ದರ್ಶನಕ್ಕೆ ಇಡಲಾಗಿದೆ.
10 ಗಂಟೆಯ ನಂತರ ಜಾಲಪ್ಪ ಪಾರ್ಥಿವ ಶರೀರವನ್ನು ಮೆರವಣಿಗೆ ಮೂಲಕ ದೊಡ್ಡಬಳ್ಳಾಪುರಕ್ಕೆ ಸಾಗಿಸಲಾಗುವುದು.
ದೊಡ್ಡಬಳ್ಳಾಪುರದ ಜಾಲಪ್ಪ ಕಾಲೇಜು ಆವರಣದಲ್ಲಿ ಸಾರ್ವಜನಿಕ ದರ್ಶನಕ್ಕೆ ಅವಕಾಶ ಕಲ್ಪಿಸಲಾಗುವುದು.
ಇಂದು ಜಾಲಪ್ಪ ರವರ ಅಂತಿಮ ದರ್ಶನ ಪಡೆಯಲು ಗಣ್ಯಾತಿ ಗಣ್ಯರು ದೊಡ್ಡಬಳ್ಳಾಪುರಕ್ಕೆ ಆಗಮಿಸಲಿದ್ದಾರೆ.
ಮಧ್ಯಾಹ್ನದ ನಂತರ ಜಾಲಪ್ಪ ಕಾಲೇಜು ಕ್ಯಾಂಪಸ್ ನಲ್ಲಿ ಸಕಲ ಸರ್ಕಾರಿ ಗೌರವಗಳೊಂದಿಗೆ, ಈಡಿಗ ಸಂಪ್ರದಾಯದಂತೆ ಅಂತಿಮ ಸಂಸ್ಕಾರ ನೆರವೇರಲಿದೆ.
ಬೆಂಗಳೂರು ಗ್ರಾಮಾಂತರ ಎಂ.ಎಲ್.ಸಿ ರವಿ ರವರು ಜಾಲಪ್ಪ ರವರ ಅಂತಿಮ ದರ್ಶನ ಪಡೆದಿದ್ದಾರೆ. ಜಾಲಪ್ಪ ಮುತ್ಸದ್ದಿ ರಾಜಕಾರಣಿಯಾಗಿ ಎಲ್ಲರಿಗೂ ಮಾದರಿಯಾಗಿದ್ದರು ಎಂದಿದ್ದಾರೆ.
ಮಧ್ಯಾಹ್ನದ ನಂತರ ಸಿದ್ದರಾಮಯ್ಯ, ಕುಮಾರಸ್ವಾಮಿ, ಯಡಿಯೂರಪ್ಪ ಸೇರಿದಂತೆ ಗಣ್ಯಾತಿಗಣ್ಯರು ಜಾಲಪ್ಪ ರವರ ಅಂತಿಮದರ್ಶನ ಪಡೆಯಲಿದ್ದಾರೆ..
ಇಂದು ಸಂಜೆ ದೊಡ್ಡಬಳ್ಳಾಪುರದಲ್ಲಿ ಜಾಲಪ್ಪ ರವರ ಅಂತಿಮ ಸಂಸ್ಕಾರ ನಡೆಯಲಿದೆ.
Kshetra Samachara
18/12/2021 10:37 am