ದೊಡ್ಡಬಳ್ಳಾಪುರ: ರಾಜಕೀಯ ಮುತ್ಸದ್ಧಿ, ನಾನಾ ಶಿಕ್ಷಣ ಸಂಸ್ಥೆಗಳ ಹರಿಕಾರ ಆರ್.ಎಲ್. ಜಾಲಪ್ಪ ಅವರ ಪಾರ್ಥಿವ ಶರೀರ ಸ್ವಗ್ರಾಮ ತೂಬಗೆರೆಯಿಂದ ದೊಡ್ಡಬಳ್ಳಾಪುರ ನಗರಕ್ಕೆ ಮೆರವಣಿಗೆ ಮೂಲಕ ಆಗಮಿಸಿದೆ.
ದೊಡ್ಡಬಳ್ಳಾಪುರದ ಆರ್.ಎಲ್.ಜಾಲಪ್ಪ ಇಂಜಿನಿಯರಿಂಗ್ ಕಾಲೇಜಿನಲ್ಲಿ ವಿದ್ಯಾರ್ಥಿಗಳು ಹಾಗೂ ಗಣ್ಯರಿಗೆ ಪಾರ್ಥಿವ ಶರೀರದ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ.
ಸಂಜೆ ಈಡಿಗ ಸಮುದಾಯದ ಸಂಪ್ರದಾಯ, ವಿಧಿವಿಧಾನದಂತೆ ಅಂತಿಮ ಸಂಸ್ಕಾರ ನಡೆಯಲಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ ಸಹ ಸಂಜೆ ಸಕಲ ಸರ್ಕಾರಿ ಗೌರವಗಳೊಂದಿಗೆ ಅಂತಿಮ ನಮನ ಸಲ್ಲಿಸಲಿದೆ.
Kshetra Samachara
18/12/2021 04:25 pm