ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ದೊಡ್ಡಬಳ್ಳಾಪುರ: ಆರ್.ಎಲ್. ಜಾಲಪ್ಪ ಅಂತ್ಯ ಸಂಸ್ಕಾರಕ್ಕೆ ಸಿದ್ಧತೆ; ಸಿದ್ದರಾಮಯ್ಯ ನಮನ

ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರದಲ್ಲಿಆರ್.ಎಲ್. ಜಾಲಪ್ಪ ಅಂತ್ಯ ಸಂಸ್ಕಾರಕ್ಕೆ ಸಿದ್ಧತೆ ನಡೆಯುತ್ತಿದ್ದು, ಜನಸಾಗರವೇ ಹರಿದು ಬಂದಿದೆ.

ಜನರನ್ನು ನಿಯಂತ್ರಿಸಲು ಪೊಲೀಸ್ ಸಿಬ್ಬಂದಿ ಹರಸಾಹಸ ಪಡುತ್ತಿದ್ದು, ಬೆಂಗಳೂರು ಗ್ರಾಮಾಂತರ ಎಸ್ಪಿ ವಂಶಿಕೃಷ್ಣ ನೇತೃತ್ವದಲ್ಲಿ ಬಿಗಿ ಬಂದೋಬಸ್ತ್ ಮಾಡಲಾಗಿದೆ.

ವಿಪಕ್ಷ ನಾಯಕ ಸಿದ್ದರಾಮಯ್ಯ ಆಗಮಿಸಿ, ಅಂತಿಮ ನಮನ ಸಲ್ಲಿಸಿದರು. ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಸಿದ್ದರಾಮಯ್ಯ,

" ಬೆಳಗಾವಿಯಲ್ಲಿ ಸಂಗೊಳ್ಳಿ ರಾಯಣ್ಣನಿಗೆ ಅಪಮಾನವೆಸಗಿದ ಪುಂಡರ ದುಷ್ಕೃತ್ಯವನ್ನು ನಾನು ತೀವ್ರವಾಗಿ ಖಂಡಿಸುತ್ತೇನೆ.

ರಾಯಣ್ಣ ಸ್ವಾಭಿಮಾನಿ ದೇಶ ಭಕ್ತ. ಅಂತವರ ಪ್ರತಿಮೆ ಧ್ವಂಸ ಮಾಡಿದ್ದು ಖಂಡನೀಯ. ಇದೊಂದು ದೇಶದ್ರೋಹದ ಕೃತ್ಯವಾಗಿದ್ದು, ಎಂಇಎಸ್ ಪುಂಡರ ವಿರುದ್ಧ ಕಠಿಣ ಕ್ರಮ ಜರುಗಿಸಲು ಆಗ್ರಹಿಸಿದರು.

Edited By : Shivu K
Kshetra Samachara

Kshetra Samachara

18/12/2021 04:36 pm

Cinque Terre

566

Cinque Terre

0

ಸಂಬಂಧಿತ ಸುದ್ದಿ