ಆನೇಕಲ್: ಎಂಇಎಸ್ ಪುಂಡಾಟಿಕೆ ಖಂಡಿಸಿ ರಾಜ್ಯಾದ್ಯಂತ ಕರ್ನಾಟಕ ರಕ್ಷಣಾ ವೇದಿಕೆಯಿಂದ ಪ್ರತಿಭಟನೆಗಳನ್ನು ಹಮ್ಮಿಕೊಳ್ಳಲಾಗಿದೆ. ಅದರಂತೆ ಬೆಂಗಳೂರು ಹೊರವಲಯದ ಆನೇಕಲ್ ನಲ್ಲೂ ಕರವೇ ಶಿವರಾಮೇಗೌಡರ ಬಣದ ರಾಜ್ಯ ಉಪಾಧ್ಯಕ್ಷ ಲೋಕೇಶ್ ಗೌಡ ನೇತೃತ್ವದಲ್ಲಿ ಪ್ರತಿಭಟನೆ ಜಾಥಾ ನಡೆಯಿತು.
ಸಂಗೊಳ್ಳಿ ರಾಯಣ್ಣನ ಪ್ರತಿಮೆಯ ಧ್ವಂಸ ವಿರೋಧಿಸಿ ಆನೇಕಲ್ ಪಟ್ಟಣದ ದೇವರಕೊಂಡಪ್ಪ ವೃತ್ತದಿಂದ ತಾಲೂಕು ಕಚೇರಿ ವರೆಗೆ ಪ್ರತಿಭಟನೆ ಜಾಥಾ ನಡೆಸಿದ ನಂತರ ತಾಲೂಕು ಕಚೇರಿ ಮುಂಭಾಗ ಸಂಕೇತಿಕವಾಗಿ ಪ್ರತಿಭಟಿಸಲಾಯಿತು. ಇದೇ ವೇಳೆ ಶಿವಸೇನೆ ವರಿಷ್ಠ ಉದ್ಧವ್ ಠಾಕ್ರೆಯ ಪ್ರತಿಕೃತಿಯನ್ನು ಸುಟ್ಟು ಹಾಕಿ ಆಕ್ರೋಶ ವ್ಯಕ್ತ ಪಡಿಸಲಾಯಿತು.
ಎಂಇಎಸ್ ವಿರುದ್ಧ ಕಠಿಣ ಕಾನೂನು ಕ್ರಮಕ್ಕೆ ಸರಕಾರ ಮುಂದಾಗಬೇಕು. ಪ್ರತಿಮೆ ಧ್ವಂಸ ಮಾಡಿದವರಿಗೆ ಶಿಕ್ಷೆಯಾಗಬೇಕು ಇಲ್ಲವಾದಲ್ಲಿ ಮುಂದಿನ ದಿನಗಳಲ್ಲಿ ಇನ್ನಷ್ಟು ಉಗ್ರ ಹೋರಾಟದ ಎಚ್ಚರಿಕೆಯನ್ನು ಪ್ರತಿಭಟನೆಕಾರರು ನೀಡಿದ್ದಾರೆ.
Kshetra Samachara
20/12/2021 06:23 pm