ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬೆಂಗಳೂರು: ರಮೇಶ್‌ಕುಮಾರ್ ವಿರುದ್ಧ ಜೆಡಿಎಸ್ ಮಹಿಳಾ ಘಟಕದಿಂದ ಪ್ರತಿಭಟನೆ

ಬೆಂಗಳೂರು: ಮಾಜಿ ಸ್ಪೀಕರ್ ರಮೇಶ್ ಕುಮಾರ್ ವಿರುದ್ದ ಜೆಡಿಎಸ್ ಮಹಿಳಾ ಘಟಕ ಪ್ರತಿಭಟನೆ ನಡೆಸಿದೆ. ಬೆಳಗಾವಿ ಅಧಿವೇಶನದಲ್ಲಿ ಅತ್ಯಾಚಾರ ಕುರಿತು ರಮೇಶ್‌ಕುಮಾರ್ ನೀಡಿದ ಅವಹೇಳನಕಾರಿ ಹೇಳಿಕೆ ಖಂಡಿಸಿ ಬೆಂಗಳೂರಿನ ಜೆಪಿ ಭವನದ ಮುಂದೆ ಪ್ರತಿಭಟನೆ ಹಮ್ಮಿಕೊಳ್ಳಲಾಗಿತ್ತು.

ಸದನದಲ್ಲಿ ಅತ್ಯಾಚಾರದ ಬಗ್ಗೆ ಕೇವಲವಾಗಿ ಮಾತನಾಡಿದ ರಮೇಶ್‌ಕುಮಾರ್ ಕೂಡಲೇ‌ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಹಾಗೂ ಕಾಂಗ್ರೆಸ್ ಪಕ್ಷ ಅವರನ್ನು ವಜಾ ಮಾಡಬೇಕೆಂದು ಆಗ್ರಹಿಸಿದ ಕಾರ್ಯಕರ್ತೆಯರು ಧಿಕ್ಕಾರದ ಘೋಷಣೆ ಕೂಗಿದರು. ಬೆಂಗಳೂರು ನಗರ ಅಧ್ಯಕ್ಷೆ ರುತ್ ಮನೋರಮಾ ನೇತೃತ್ವದಲ್ಲಿ ಪ್ರತಿಭಟನೆ ಹಮ್ಮಿಕೊಳ್ಳಲಾಗಿತ್ತು.

Edited By : Manjunath H D
Kshetra Samachara

Kshetra Samachara

21/12/2021 01:09 pm

Cinque Terre

1.22 K

Cinque Terre

0

ಸಂಬಂಧಿತ ಸುದ್ದಿ