ಬೆಂಗಳೂರು : ಕರ್ನಾಟಕ ದಲಿತ ಸಂಘರ್ಷ ಸಮಿತಿ (ಅಂಬೇಡ್ಕರ್ ವಾದ) ವತಿಯಿಂದ ದಲಿತರ ಸಬಲೀಕರಣಕ್ಕಾಗಿ ಹಾಗೂ 18 ಹಕ್ಕೊತ್ತಾಯಗಳನ್ನು ಜಾರಿಗೆ ಆಗ್ರಹಿಸಿ ಡಿಸೆಂಬರ್ 28 ರಂದು ವಿಧಾನಸೌಧ ಚಲೋ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಎಂದು ಬೆಂಗಳೂರು ವಿಭಾಗಿಯ ಉಪ ಪ್ರಧಾನ ಸಂಚಾಲಕ ಮಣಿಪಾಲ್ ರಾಜಪ್ಪ ತಿಳಿಸಿದರು.
ಕೆ.ಆರ್.ಪುರದಲ್ಲಿ ಹಮ್ಮಿಕೊಂಡಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಕೇಂದ್ರ ಮತ್ತು ರಾಜ್ಯದಲ್ಲಿ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದ ನಂತರ ದೇಶದಲ್ಲಿ ದಲಿತರ ಮೇಲೆ ದಾಳಿಗಳು ತೀವ್ರಗೊಂಡಿವೆ. ಹತ್ರಾಸ್ ಹುನ್ನಾವೋ, ದೆಹಲಿ ಅತ್ಯಾಚಾರ, ಅಸ್ಪೃಶ್ಯತೆ ಆಚರಣೆ ಮತ್ತು ಕೊಲೆಗಳು ನಿರಂತರವಾಗಿ ಸಮಾಜಘಾತುಕ ಘಟನೆಗಳು ನಡೆಯುತ್ತಿರುವ ತಡೆಯುವಲ್ಲಿ ಸರ್ಕಾರಗಳು ಸಂಪೂರ್ಣ ವಿಫಲವಾಗಿದೆ.
ಈ ದೇಶದ ಮೂಲ ನಿವಾಸಿಗಳ ಮೇಲೆ ದೌರ್ಜನ್ಯ, ಕೊಲೆ ಮತ್ತು ಅತ್ಯಾಚಾರ ನಡೆದಾಗ ಮೌನಕ್ಕೆ ಜಾರಿದ್ದಾರೆ. ಹಾಗೆಯೇ ವಿರೋದ ಪಕ್ಷಗಳು ಒಳ ಒಪ್ಪಂದ ಮಾಡಿಕೊಂಡು ಹಲ್ಲು ಕಿತ್ತ ಹಾವಿನಂತೆ ಆಗಿದೆ ಎಂದು ಆರೋಪಿಸಿದರು.
ನಂತರ ಜಿಲ್ಲಾ ಪ್ರಧಾನ ಸಂಚಾಲಕ ಮುನಿನಂಜಪ್ಪ ಮಾತನಾಡಿ ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಡಿಸೆಂಬರ್ 28 ರಂದು ರಾಜ್ಯ ಪ್ರಧಾನ ಸಂಚಾಲಕ ಮಾವಳ್ಳಿ ಶಂಕರ್ ನೇತೃತ್ವದಲ್ಲಿ ವಿಧಾನಸೌಧ ಚಲೋ ಪ್ರತಿಭಟನೆ ಕಾರ್ಯಕ್ರಮ ನಡೆಯಲಿದೆ. ಮಧ್ಯಾಹ್ನ 12 ಗಂಟೆಗೆ ಚಿಕ್ಕ ಲಾಲ್ ಬಾಗ್ ನಿಂದ ಬೃಹತ್ Rally ಆರಂಭವಾಗಲಿದೆ. ಸುಮಾರು ರಾಜ್ಯದ ಎಲ್ಲಾ 20 ಸಾವಿರ ಕಾರ್ಯಕರ್ತರು ಸೇರುವ ನಿರೀಕ್ಷೆ ಇದೆ ಎಂದರು.
Kshetra Samachara
24/12/2021 08:36 pm