ಬೆಂಗಳೂರು: ಬಿಬಿಎಂಪಿ ವತಿಯಿಂದ ಈಜಿಪುರ ಸಿಗ್ನಲ್‌ನಿಂದ ಮಡಿವಾಳ ಕೇಂದ್ರೀಯ ಸದನದವರೆಗೆ ನಡೆಯುತ್ತಿರುವ ಮೇಲ್ಸೆತುವೆ ಕಾಮಗಾರಿ ವಿಳಂಬ ಖಂಡಿಸಿ ಕೋರಮಂಗಲದ ಸೋನಿ ಸಿಗ್ನಲ್ ಬಳಿ ಕೆಪಿಸಿಸಿ ಕಾರ್ಯಾಧ್ಯಕ್ಷ ರಾಮಲಿಂಗಾರೆಡ್ಡಿ ನೇತೃತ್ವದಲ್ಲಿ ಬೃಹತ್ ಪ್ರತಿಭಟನೆ ನಡೆಸಲಾಯಿತು.
ಕಳೆದ 4 ವರ್ಷಗಳಿಂದ ಫ್ಲೈಓವರ್ ಕಾಮಗಾರಿ ವಿಳಂಬವಾಗಿರುವುದರಿಂದ ಈ ಪ್ರತಿಭಟನೆ ಕೈಗೊಳ್ಳಲಾಗಿದೆ.
ಪ್ರತಿಭಟನೆಯಲ್ಲಿ ಮಾಜಿ ಮೇಯರ್ ಗಳು ಹಾಗೂ ಮಾಜಿ ಪಾಲಿಕೆ ಸದಸ್ಯರು ಸೇರಿದಂತೆ ಶಾಸಕಿ ಸೌಮ್ಯ ರೆಡ್ಡಿ ಪಾಲ್ಗೊಂಡಿದ್ದರು.
ಪ್ರತಿಭಟನಾ ಸ್ಥಳಕ್ಕೆ ಬಿಬಿಎಂಪಿ ಮುಖ್ಯ ಆಯುಕ್ತ ಗೌರವ್ ಗುಪ್ತ ಭೇಟಿ ನೀಡಿದರು.
Kshetra Samachara
27/12/2021 05:24 pm