ಮಹಾದೇವಪುರ: ಎರಡು ದಿನಗಳ ಹಿಂದೆ ಬಿಬಿಎಂಪಿ ಅಧಿಕಾರಿಗಳು ಮಹಾದೇವಪುರದ ಮಣಿಪಾಲ್ ಆಸ್ಪತ್ರೆಯಿಂದ ಐಟಿಪಿಎಲ್ ವರೆಗಿನ ಪಾದಚಾರಿ ಮಾರ್ಗ ತೆರವುಗೊಳಿಸಿದ ಹಿನ್ನೆಲೆಯಲ್ಲಿ ಇಂದು ಬಿಎಸ್ ಎಸ್ ಸಮಿತಿ ನೇತೃತ್ವದಲ್ಲಿ ನೂರಾರು ಬೀದಿಬದಿ ವ್ಯಾಪಾರಿಗಳು ನ್ಯಾಯ ಕೊಡಿಸುವಂತೆ ಮಣಿಪಾಲ್ ಆಸ್ಪತ್ರೆ ಬಳಿ ಪ್ರತಿಭಟನೆ ನಡೆಸಿದರು.
ಈ ಸಂದರ್ಭ ಬಿಎಸ್ ಎಸ್ ಸಂಘಟನೆ ರಾಜ್ಯಾಧ್ಯಕ್ಷ ಹೂಡಿ ಡಾ.ರಾಮಚಂದ್ರ ಮಾತನಾಡಿ, ಬಡವರ ಮೇಲೆ ಅಧಿಕಾರಿಗಳು ದರ್ಪ ತೋರಿರುವುದು ಖಂಡನೀಯ. ಪಾದಚಾರಿ ಮಾರ್ಗ ಆಕ್ರಮಿಸಿಕೊಂಡವರ ವಿರುದ್ಧ ಕಾನೂನು ಕ್ರಮ ಜರುಗಿಸಿ, ಅದು ಬಿಟ್ಟು ಬೀದಿಬದಿಯ ಸಣ್ಣಪುಟ್ಟ ವ್ಯಾಪಾರಿಗಳು ಕಾನೂನಿನಡಿ ಹಲವು ವರ್ಷಗಳಿಂದ ವ್ಯಾಪಾರ ನಡೆಸುತ್ತಿದ್ದು, ಅವರಿಗೆ ವ್ಯಾಪಾರ ಮಾಡಲು ಅವಕಾಶ ನೀಡಿ. ಇಲ್ಲವಾದರೆ ಉಗ್ರ ಹೋರಾಟ ಸಂಘಟಿಸುವುದಾಗಿ ಎಚ್ಚರಿಸಿದರು.
"ನಮ್ಮ ಜೀವನವನ್ನು ಈ ಸಣ್ಣಪುಟ್ಟ ವ್ಯಾಪಾರದಿಂದ ನಡೆಸುತ್ತಿದ್ದು, ಅಧಿಕಾರಿಗಳು ಏಕಾಏಕಿ ತೆರವು ಮಾಡಿರುವುದರಿಂದ ಜೀವನ ನಡೆಸಲು ಸಾಧ್ಯವಾಗುತ್ತಿಲ್ಲ. ಬೇರೆಡೆ ಹೋಗಿ ವ್ಯಾಪಾರ ಮಾಡೋಣ ಅಂದರೆ, ನಾವು ಹುಟ್ಟಿ- ಬೆಳೆದ ಊರು ಬಿಟ್ಟು ಹೋಗಲು ಮನಸ್ಸಾಗುತ್ತಿಲ್ಲ" ಎಂದು ಅಳಲು ತೋಡಿಕೊಂಡರು.
Kshetra Samachara
29/12/2021 08:22 pm