ವರದಿ: ಗಣೇಶ್ ಹೆಗಡೆ
ಬೆಂಗಳೂರು: ಒಕ್ಕಲಿಗರ ಸಂಘದ ನೂತನ ಅಧ್ಯಕ್ಷರಾಗಿ ಶ್ರವಣ ಬೆಳಗೊಳದ ಶಾಸಕ ಸಿ.ಎನ್. ಬಾಲಕೃಷ್ಣ ಆಯ್ಕೆಯಾಗಿದ್ದಾರೆ.
ಇಂದು ಅಧ್ಯಕ್ಷ, ಉಪಾಧ್ಯಕ್ಷ, ಪ್ರಧಾನ ಕಾರ್ಯದರ್ಶಿ ಸ್ಥಾನದ ಚುನಾವಣೆ ನಡೆಯಿತು. ಅಧ್ಯಕ್ಷ ಗಾದಿಗಾಗಿ ಜಿದ್ದಾಜಿದ್ದಿನ ಪೈಪೋಟಿ ನಡೆದಿತ್ತು. ಅಧ್ಯಕ್ಷ ಸ್ಥಾನಕ್ಕಾಗಿ ಸೀಕ್ರೆಟ್ ಬ್ಯಾಲೆಟ್ ಪೇಪರ್ ಮೂಲಕ ಮತದಾನ ಮಾಡಲಾಗಿತ್ತು.
35 ನಿರ್ದೇಶಕರ ಪೈಕಿ 20 ನಿರ್ದೇಶಕರು ಬಾಲಕೃಷ್ಣ ಪರ ಮತ ಚಲಾಯಿಸಿದ್ದು, ಬಾಲಕೃಷ್ಣ ಬಹುಮತ ಪಡೆದು ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ.
ವಿವಿಧ ಮುಖಂಡರ ನೇತೃತ್ವದಲ್ಲಿ ರಚನೆಯಾಗಿದ್ದ ಯಾವುದೇ ಸಿಂಡಿಕೇಟ್ ಬಹುಮತ ಪಡೆಯಲು ಬೇಕಾದ 18 ಸದಸ್ಯರನ್ನು ಗೆದ್ದಿರಲಿಲ್ಲ. ಡಿ.12ರಂದು ನಡೆದ ಚುನಾವಣೆಯಲ್ಲಿ ಸಂಘದ 35 ಕಾರ್ಯಕಾರಿ ಸಮಿತಿ ಸದಸ್ಯರನ್ನು ಆಯ್ಕೆ ಮಾಡಲಾಗಿದೆ. ಸಂಘದ ಎರಡು ಉಪಾಧ್ಯಕ್ಷ ಸ್ಥಾನ, ತಲಾ ಒಂದು ಪ್ರಧಾನ ಕಾರ್ಯದರ್ಶಿ, ಸಹಾಯಕ ಕಾರ್ಯದರ್ಶಿ ಹಾಗೂ ಖಜಾಂಚಿ ಸ್ಥಾನಕ್ಕೆ ಚುನಾವಣೆ ನಡೆಯಿತು.
PublicNext
05/01/2022 09:59 pm