ಬೆಂಗಳೂರು: ಎಲ್ಲರನ್ನೂ ಎಲ್ಲ ಸಮಯದಲ್ಲೂ ಮರುಳು ಮಾಡಲು ಸಾಧ್ಯವಿಲ್ಲ. ಕಾಂಗ್ರೆಸ್‌ನವರು ಕೇವಲ ಒಂದು ಡಿಪಿಆರ್ ಸಿದ್ಧಪಡಿಸಿ ಸಲ್ಲಿಸಲು ನಾಲ್ಕು ವರ್ಷ ತೆಗೆದುಕೊಂಡಿದ್ದಾರೆ. ಸದ್ಯ ಕಾಂಗ್ರೆಸ್‌ನವರು ಕಳೆದ ಮೂರು ವರ್ಷಗಳಲ್ಲಿ ಅಧಿವೇಶನ ಸೇರಿದಂತೆ ಎಲ್ಲಿಯೂ ಮೇಕೆದಾಟು ವಿಚಾರ ಎತ್ತಲಿಲ್ಲ. ಹೀಗಾಗಿ ಸದ್ಯ ನಡೆಯುತ್ತಿರುವ ಪಾದಯಾತ್ರೆ ಸಂಪೂರ್ಣ ರಾಜಕೀಯ ಪ್ರೇರಿತ ಎಂದು ಸಿಎಂ ಬಸವರಾಜ್ ಬೊಮ್ಮಾಯಿ ಹೇಳಿದ್ದಾರೆ.
ಬೆಂಗಳೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಹಿಂದೆ ಸರ್ಕಾರವನ್ನೇ ನಡೆಸಿರುವ ಪಕ್ಷಕ್ಕೆ ಕಾನೂನು ಏನು? ಕಾವೇರಿ ನ್ಯಾಯಾಧೀಕರಣ ಏನು ಹೇಳಿದೆ? ಅಂತರಾಜ್ಯ ಜಲವಿವಾದ ಏನು? ಇದೆಲ್ಲವೂ ಗೊತ್ತಿದೆ. ಆದರೂ ಪಾದಯಾತ್ರೆ ಹಮ್ಮಿಕೊಂಡಿದ್ದಾರೆ. ಜನ ಇದನ್ನೆಲ್ಲ ಗಮನಿಸುತ್ತಿದ್ದಾರೆ. ಅವರೇ ತೀರ್ಮಾನ ಕೈಗೊಳ್ಳುತ್ತಾರೆ. ಇದು ಬೆಟ್ಟ ಅಗೆದು ಇಲಿ ಹಿಡಿದಂತೆ. ಪಾದಯಾತ್ರೆಯಲ್ಲಿ ಕೊರೊನಾ ನಿಯಮ ಉಲ್ಲಂಘನೆ ಆಗಿದೆ. ಹೀಗಾಗಿ ಅವರಿಗೆ ನೋಟಿಸ್ ನೀಡಿದ್ದೇವೆ ಎಂದು ಬೊಮ್ಮಾಯಿ ತಿಳಿಸಿದರು.
PublicNext
09/01/2022 12:59 pm