ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಕಾಂಗ್ರೆಸ್‌ನವರು ಪಾದಯಾತ್ರೆ ಹೆಸರಲ್ಲಿ ಬೀದಿ ನಾಟಕ ಮಾಡ್ತಿದ್ದಾರೆ: ಸುಧಾಕರ್

ಬೆಂಗಳೂರು: ಕಾಂಗ್ರೆಸ್‌ನವರು ಪಾದಯಾತ್ರೆ ಮೂಲಕ ಬೀದಿ ನಾಟಕ ಮಾಡ್ತಿದ್ದಾರೆ. ಈ ರೀತಿ ಸಾವಿರಾರು ಜನರನ್ನು ಸೇರಿಸಿ ಪಾದಯಾತ್ರೆ ಮಾಡಿದ್ರೆ ಕೊರೊನಾ ಸೋಂಕು ಹೆಚ್ಚಾಗುತ್ತದೆ ಎಂದು ಆರೋಗ್ಯ ಸಚಿವ ಡಾ. ಸುಧಾಕರ್ ಹೇಳಿದ್ದಾರೆ.

ಬೆಂಗಳೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಚುನಾವಣೆಗೋಸ್ಕರ ಕಾಂಗ್ರೆಸ್ ನಾಯಕರು ಬೀದಿ ನಾಟಕ ಮಾಡ್ತಿದ್ದಾರೆ. ಇದು ಕಾವೇರಿಗೆ ಮಾಡುವ ಅವಮಾನ. ಮುಂಬರುವ ಬಿಬಿಎಂಪಿ ಚುನಾವಣೆ ಗುರಿಯಾಗಿಟ್ಟುಕೊಂಡು ಹೋರಾಟ ಮಾಡ್ತಿದ್ದಾರೆ. ಇದು ನನಗೆ ಖೇದ ಉಂಟುಮಾಡಿದೆ. ಇದಕ್ಕೆ ನನ್ನ ದಿಕ್ಕಾರವಿದೆ. ಐದು ವರ್ಷ ಅಧಿಕಾರದಲ್ಲಿದ್ದಾಗ ಏನು ಮಾಡಿದ್ರು? ಮೇಕೆದಾಟುಗೆ ಏನೇ ಒಳ್ಳೆ ಕೆಲಸ ಆಗಬೇಕು ಅಂದ್ರೆ ಅದು ಬಿಜೆಪಿಯಿಂದ, ಬೊಮ್ಮಾಯಿ ಸರ್ಕಾರದಿಂದ. ಜನ ಇದನ್ನೆಲ್ಲ ನೋಡುತ್ತಿದ್ದಾರೆ ಅವರೇ ನಿರ್ಧರಿಸುತ್ತಾರೆ ಎಂದು ಸುಧಾಕರ್ ಹೇಳಿದ್ದಾರೆ.

Edited By : Shivu K
PublicNext

PublicNext

09/01/2022 01:31 pm

Cinque Terre

28.7 K

Cinque Terre

5

ಸಂಬಂಧಿತ ಸುದ್ದಿ