ದೇವನಹಳ್ಳಿ: ಪಕ್ಷಾತೀತವಾಗಿ ಕುಡಿಯುವ ನೀರಿನ ಯೋಜನೆ ಬೆಂಬಲಿಸಬೇಕು ಎಂದು
ಚಿಕ್ಕಬಳ್ಳಾಪುರ ಸಂಸದ ಬಿ.ಎನ್.ಬಚ್ಚೇಗೌಡರು ʼಕಾಂಗ್ರೆಸ್ ಮೇಕೆದಾಟು ಪಾದಯಾತ್ರೆʼ ನೇರವಾಗಿಯೇ ಬೆಂಬಲ ಘೋಷಿಸಿದ್ದಾರೆ.
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಜಿಲ್ಲಾಧಿಕಾರಿ ಕಚೇರಿಯಲ್ಲಿ ಸಂಸದ ಬಚ್ಚೇಗೌಡ ಮಾತನಾಡಿ, "ಮೇಕೆದಾಟು ಕುಡಿಯುವ ನೀರಿನ ಯೋಜನೆಗೆ ಪಕ್ಷಾತೀತವಾಗಿ ಹೋರಾಟ ಆಗಬೇಕು. ಕಾಂಗ್ರೆಸ್ ಪಾದಯಾತ್ರೆಗೆ ನನ್ನ ಸಂಪೂರ್ಣ ಬೆಂಬಲ ಇದೆ ಎಂದರು.
ಬಿ.ಎನ್.ಬಚ್ಚೇಗೌಡ ಅಧ್ಯಕ್ಷತೆಯಲ್ಲಿ ದಿಶಾ ಸಮಿತಿ ಸಭೆ ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ ಭವನದ ಜಿಪಂ ಸಭಾಂಗಣದಲ್ಲಿ ನಡೆಯಿತು. ಜಿಲ್ಲೆಯ ಶಾಸಕರುಗಳು, ಅಧಿಕಾರಿಗಳು ಭಾಗವಹಿಸಿದ್ದರು.
ಅಪ್ಪ ಬಚ್ಚೇಗೌಡ ಚಿಕ್ಕಬಳ್ಳಾಪುರ ಸಂಸದನಾದರೆ, ಮಗ ಹೊಸಕೋಟೆಯ ಕಾಂಗ್ರೆಸ್ ಬೆಂಬಲಿತ ಶಾಸಕ. ಸರ್ಕಾರ ರಚನೆಗೆ ಕಾಂಗ್ರೆಸ್ ನಲ್ಲಿ ಸಚಿವರಾಗಿದ್ದ ಎಂಟಿಬಿ ಬಿಜೆಪಿಗೆ ಬಂದಿದ್ದರು. ಎಂಟಿಬಿ ಸಲುವಾಗಿ ಬಿಜೆಪಿ, ಶರತ್ ಬಚ್ಚೇಗೌಡರಿಗೆ ಟಿಕೆಟ್ ನೀಡಿರಲಿಲ್ಲ. ಇದೀಗ ಶರತ್, ಡಿ.ಕೆ.ಶಿವಕುಮಾರ್ ಪಕ್ಕಾ ಬೆಂಬಲಿಗರಾಗಿ ಗುರ್ತಿಸಿಕೊಂಡಿದ್ದಾರೆ. ನೆನ್ನೆ ಪಾದಯಾತ್ರೆಯಲ್ಲೂ ಭಾಗಿಯಾಗಿದ್ದರು.
ಇಂತಹ ಸಂದರ್ಭ ಚಿಕ್ಕಬಳ್ಳಾಪುರ ಬಿಜೆಪಿ ಸಂಸದ, ಮಗನಿಗೆ ಬೆಂಬಲ ಸೂಚಿಸಿ ಕಾಂಗ್ರೆಸ್ ಪರವಾಗಿ ಬ್ಯಾಟ್ ಬೀಸಿರುವುದು ಬಿಜೆಪಿಗೆ ಸಖತ್ ಟಾಂಗ್ ಕೊಟ್ಟಂತಾಗಿದೆ.
Kshetra Samachara
10/01/2022 05:09 pm