ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಆನೇಕಲ್: ತಮಿಳುನಾಡು ಸರಕಾರದ ವಿರುದ್ಧ ಕನ್ನಡ ಪರ ಸಂಘಟನೆ ಪ್ರತಿಭಟನೆ

ಆನೇಕಲ್: ಒಂದೆಡೆ ತಮಿಳುನಾಡಿನ‌ ರೈತರು ಅತ್ತಿಬೆಲೆ ಗಡಿಯಲ್ಲಿ ಪ್ರತಿಭಟನೆ ನಡೆಸುತ್ತಿದ್ದರೆ, ಮತ್ತೊಂದೆಡೆ ಆನೇಕಲ್‌ನ‌ ಸೋಲೂರು ಗಡಿಯಲ್ಲಿ ಕನ್ನಡ ಪರ ಸಂಘಟನೆಗಳ ಒಕ್ಕೂಟದ ವತಿಯಿಂದ ಕೇಂದ್ರ ಸರಕಾರದ ವಿರುದ್ಧ ಮೇಕೆದಾಟು ವಿಚಾರವಾಗಿ ಪ್ರತಿಭಟನೆ ನಡೆಸಲಾಯಿತು.

ಕನ್ನಡ ಒಕ್ಕೂಟ ಅಧ್ಯಕ್ಷರಾದ ವಾಟಾಳ್ ನಾಗರಾಜ್ ನೇತೃತ್ವದಲ್ಲಿ ಆನೇಕಲ್ ತಾಲೂಕಿನ ಸೋಲೂರು ಗಡಿಯಲ್ಲಿ ನಡೆಸಿದ ಪ್ರತಿಭಟನೆಗೆ ಎಲ್ಲಾ ಕನ್ನಡಪರ ಸಂಘಟನೆಗಳ ನಾಯಕರು ಕೈಜೋಡಿಸಿದ್ದರು. ತಮಿಳುನಾಡು ಪೊಲೀಸರ ಎದುರೇ ಕನ್ನಡಪರ ಕಾರ್ಯಕರ್ತರು ತಮಿಳುನಾಡು ಸರ್ಕಾರದ ವಿರುದ್ಧ ಘೋಷಣೆ ಕೂಗಿ ಕೇಂದ್ರ ಸರ್ಕಾರ ಮಲತಾಯಿ ಧೋರಣೆ ಮಾಡುತ್ತಿದೆ. ಮೇಕೆದಾಟು ನಮ್ಮ ಹಕ್ಕು ಎಂದು ಪ್ರತಿಭಟನಕಾರರು ಕೇಂದ್ರ ಸರ್ಕಾರದ ವಿರುದ್ಧ ಆಕ್ರೋಶವನ್ನು ಹೊರಹಾಕಿದ್ದಾರೆ.

Edited By : Manjunath H D
Kshetra Samachara

Kshetra Samachara

19/01/2022 06:50 pm

Cinque Terre

804

Cinque Terre

0

ಸಂಬಂಧಿತ ಸುದ್ದಿ