ಬೆಂಗಳೂರು -ಬಿಬಿಎಂಪಿ ಚುನಾವಣೆಗೆ ಬಿಜೆಪಿ ಸಿದ್ಧತೆ ಮುಂದುವರಿಸಿದ್ದು, ಈ ಕುರಿತು ಇನ್ನಷ್ಟು ಮಾಹಿತಿ ಪಡೆಯುವ ಸಲುವಾಗಿ ಜನವರಿ 25 ರಿಂದ 3 ದಿನಗಳ ಕಾಲ ಅಂದರೆ ಜನವರಿ 25, 26, 27 ರಂದು ಸಿಎಂ ಬಸವರಾಜ ಬೊಮ್ಮಾಯಿ ಸಭೆ ನಡೆಸಲಿದ್ದಾರೆ. ಸಿಎಂ ಜತೆಗಿನ ಈ ಸಭೆಯ ಚರ್ಚೆಯಲ್ಲಿ ಬೆಂಗಳೂರು ನಗರ ವ್ಯಾಪ್ತಿಯ ಪದಾಧಿಕಾರಿಗಳು ಭಾಗಿಯಾಗಲಿದ್ದಾರೆ. ರಾಜ್ಯ ಬಿಜೆಪಿ ಕಚೇರಿ ಜಗನ್ನಾಥ ಭವನದಲ್ಲಿ ಈ ಸಭೆ ನಡೆಯಲಿದೆ. ಬೆಂಗಳೂರಿನ ಮೂರು ಜಿಲ್ಲೆಗಳ ಪದಾಧಿಕಾರಿಗಳ ಜೊತೆ ಮೂರು ದಿನಗಳ ಕಾಲ ಸಿಎಂ ಸಭೆ ನಡೆಸಲಿದ್ದಾರೆ.
ಜನವರಿ 25 ರಂದು ಬೆಂಗಳೂರು ಉತ್ತರ, 26 ರಂದು ಬೆಂಗಳೂರು ಕೇಂದ್ರ ಮತ್ತು 27 ರಂದು ಬೆಂಗಳೂರು ದಕ್ಷಿಣ ಜಿಲ್ಲೆಗಳ ಸಭೆ ನಡೆಯಲಿದೆ. ಸಿಎಂ ಜೊತೆ ಬೆಂಗಳೂರಿನ ಮೂರು ಜಿಲ್ಲೆಗಳ ಜಿಲ್ಲಾಧ್ಯಕ್ಷರು, ಪ್ರಧಾನ ಕಾರ್ಯದರ್ಶಿಗಳು, ವಿಭಾಗ ಉಸ್ತುವಾರಿಗಳು ಮತ್ತು ಸಂಘಟನಾ ಪ್ರಧಾನ ಕಾರ್ಯದರ್ಶಿಗಳು ಸಭೆಯಲ್ಲಿ ಭಾಗಿಯಾಗಲಿದ್ದಾರೆ. ಸಿಎಂ ನಿವಾಸದಲ್ಲಿ ಭಾನುವಾರ ಸಭೆ ನಡೆಯಲಿದೆ.
Kshetra Samachara
20/01/2022 04:41 pm