ಬೆಂಗಳೂರು: ಯಲಹಂಕದ ಖಾಸಗಿ ಹೊಟೇಲ್ ನಲ್ಲಿ ನಡೆದ ಸಭೆಯಲ್ಲಿ ಬಳ್ಳಾರಿ ಯೂತ್ ಕಾಂಗ್ರೆಸ್ ಅಧ್ಯಕ್ಷನ ಮೇಲೆ ಕಾಂಗ್ರೆಸ್ ಮುಖಂಡ ಮೊಹಮ್ಮದ್ ನಲಪಾಡ್ ನಿಂದಿಸಿರುವ ಆರೋಪ ಕೇಳಿಬಂದಿತ್ತು. ಬಳ್ಳಾರಿ ಜಿಲ್ಲಾ ಘಟಕದ ಅಧ್ಯಕ್ಷ ಸಿದ್ದು ಹಳ್ಳೇಗೌಡಗೆ ಯೂತ್ ಕಾಂಗ್ರೆಸ್ ಮುಖಂಡ ನಲಪಾಡ್ ಆಂಡ್ ಟೀಂ ಅಸಭ್ಯವಾಗಿ ವರ್ತಿಸಿ ನಿಂದಿಸಿರುವುದಾಗಿ ಸುದ್ದಿ ಹಬ್ಬಿತ್ತು. ನಿಂದನೆ ವಿಚಾರವಾಗಿ ಮೊಹಮ್ಮದ್ ನಲಪಾಡ್ ಪ್ರತಿಕ್ರಿಯಿಸಿ ನಿನ್ನೆ ನಡೆದ ಸಭೆಯಲ್ಲಿ ಯಾರನ್ನು ನಿಂದಿಸಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.
ಈ ಬಗ್ಗೆ ಮಾತನಾಡಿದ ಗೃಹ ಸಚಿವ ಆರಗ ಜ್ಞಾನೇಂದ್ರ ಅವರು" ನಲಪಾಡ್ ಹಾಗೂ ಕಾಂಗ್ರೆಸ್ ಜಿಲ್ಲಾ ಪದಾಧಿಕಾರಿಗಳು ನಿನ್ನೆ ಖಾಸಗಿ ಹೊಟೇಲ್ ನಲ್ಲಿ ಸೇರಿದ್ದರು. ಯಾರೂ ಸಹ ಪೊಲೀಸರಿಗೆ ಇದುವರೆಗೆ ಯಾವುದೇ ದೂರು ಕೊಟ್ಟಿಲ್ಲ" ಎಂದು ತಿಳಿಸಿದ್ದಾರೆ.
ಸಿದ್ದು ಹಳ್ಳೇಗೌಡ ಸ್ವತಃ ಸೃಷ್ಟಿಕರಣ ನೀಡಿ, ನನ್ನ ಮೇಲೆ ನಲಪಾಡ್ ಸೇರಿದಂತೆ ಯಾರೂ ಹಲ್ಲೆ ನಡೆಸಿಲ್ಲ. ಇವೆಲ್ಲವೂ ಬಿಜೆಪಿ ರೂಪಿಸಿದ ಷಡ್ಯಂತ್ರ ಎಂದು ಹೇಳಿದ್ದಾರೆ. ಯಾರಾದರೂ ಹಲ್ಲೆ ನಡೆಸಿದ್ದಾರೆ ಎಂದು ಬಿಂಬಿಸಿದ್ರೆ ಮಾನನಷ್ಟ ಮೊಕದ್ದಮೆಯನ್ನೂ ಹೂಡುವುದಾಗಿ ಸಿದ್ದು ಹಳ್ಳೇಗೌಡ ತಿಳಿಸಿದ್ದಾರೆ.
PublicNext
20/01/2022 07:04 pm