ಬೆಂಗಳೂರು : ವೀಕೆಂಡ್ ಕರ್ಫ್ಯೂ ಸೇರಿದಂತೆ ಕೋವಿಡ್ ಕಂಟ್ರೋಲ್ ಮಾಡುವ ನಿಟ್ಟಿನಲ್ಲಿ ಇಂದು ಸಿಎಂ ಮಹತ್ವದ ಸಭೆ ನಡೆಸುತ್ತಿದ್ದಾರೆ.
ಈ ಕುರಿತು ಮಾಧ್ಯಮಗಳ ಜೊತೆ ಮಾತನಾಡಿದ ಅವರು ಎಲ್ಲರ ಅಭಿಪ್ರಾಯ ಗಮನ ದಲ್ಲಿಟ್ಟುಕೊಂಡು ನಿರ್ಧಾರ ಮಾಡುತ್ತೇವೆ ಎಂದು ಹೇಳಿದ್ದಾರೆ. ರಾಜಕೀಯ ನಾಯಕರು, ತಜ್ಞರು,ಸಂಘ-ಸಂಸ್ಥೆಗಳು ನೀಡಿರುವ ಅಭಿಪ್ರಾಯದ ಬಗ್ಗೆ ಚರ್ಚೆ ನಡೆಸುತ್ತೇವೆ.
ಮುಂದಿನ ಕೋವಿಡ್ ಪರಿಣಾಮವನ್ನು ಗಮನದಲ್ಲಿ ಇಟ್ಟುಕೊಂಡು ನಿರ್ಧಾರ ತೆಗೆದುಕೊಳ್ಳಬೇಕಾಗುತ್ತದೆ ಎಂದು ಸಿಎಂ ಹೇಳಿದರು.
ವೀಕೆಂಡ್ ಕರ್ಫ್ಯೂ, ನೈಟ್ ಕರ್ಫ್ಯೂ ಸೇರಿದಂತೆ ಕೆಲವೊಂದು ಕೋವಿಡ್ ನಿಯಮಗಳ ಬಗ್ಗೆ ಸಾರ್ವಜನಿಕ ವಲಯದಲ್ಲಿ ವ್ಯಾಪಕ ಟೀಕೆ ವ್ಯಕ್ತವಾಗಿದೆ.
Kshetra Samachara
21/01/2022 01:13 pm